ಖುಂಟಿ, 10 ಮೇ :ಆ್ಯಂಕರ್:ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಪ್ರಚಾರ ಬಿರುಸುಗೊಂಡಿದೆ. ಜಾರ್ಖಂಡ್ ರಾಜ್ಯದ ೧೪ ಸ್ಥಾನಗಳಿಗೆ ನಾಲ್ಕನೇ ಹಂತದ ಚುನಾವಣೆ ನಡೆಯಲಿದೆ. ನಾಲ್ಕನೇ ಹಂತದಲ್ಲಿ ನಾಲ್ಕು ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಐದನೇ ಹಂತದಲ್ಲಿ ಮೂರು ಸ್ಥಾನಗಳಿಗೆ ಮತದಾನ ನಡೆಯಲಿದೆ.
ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಎನ್ ಡಿ ಎ ಅಭ್ಯರ್ಥಿ ಪರವಾಗಿ ಖುಂಟಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿಯ ಹಿರಿಯ ನಾಯಕ ರಾಜನಾಥ್ ಸಿಂಗ್ ಇಂದು ಗೊಡ್ಡಾದಲ್ಲಿ ರೋಡ್ ಶೋ ನಡೆಸಲಿದ್ದಾರೆ ಮತ್ತು ಬಿಜೆಪಿ ಅಭ್ಯರ್ಥಿ ಪರವಾಗಿ ದುಮ್ಕಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
