ದೆಹಲಿಯ ವಕ್ಫ್ ಬೋರ್ಡ್‍ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆಯ ಮೇಲೆ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಇಡಿ ದಾಳಿಯ ಬಗ್ಗೆ ಅಮಾನತುಲ್ಲಾ ಖಾನ್ ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಅಕ್ರಮ ನೇಮಕಾತಿ ಮತ್ತು ಹಣಕಾಸಿನ ಅವ್ಯವಹಾರ ನಡೆಸಿದ್ದಾರೆ ಎಂಬ ಆರೋಪವನ್ನು ಅವರು ಎದುರಿಸುತ್ತಿದ್ದಾರೆ.
BulletsIn
- ದೆಹಲಿಯ ವಕ್ಫ್ ಬೋರ್ಡ್‍ನಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ ದಾಳಿ.
- ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ಮನೆಯಲ್ಲಿ ದಾಳಿ ನಡೆಸಲಾಗಿದೆ.
- ಖಾನ್ ವಕ್ಫ್ ಮಂಡಳಿಯ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅಕ್ರಮ ನೇಮಕಾತಿ ಆರೋಪ.
- ಹಣಕಾಸಿನ ಅವ್ಯವಹಾರ ಆರೋಪವೂ ಕೂಡ ಎದುರಿಸುತ್ತಿದ್ದಾರೆ.
- ಇಡಿ ಅಧಿಕಾರಿಗಳು ಅವರ ಮನೆಯಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
- ಅಮಾನತುಲ್ಲಾ ಖಾನ್ ಈ ದಾಳಿಯ ಬಗ್ಗೆ ಎಕ್ಸ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
- ಖಾನ್ ತಮ್ಮನ್ನು ಬಂಧಿಸಲು ಇಡಿ ಅಧಿಕಾರಿಗಳು ಬಂದುದಾಗಿ ಹೇಳಿದ್ದಾರೆ.
- ಇಡಿ ಕೇಂದ್ರ ಸರಕಾರದ ಆದೇಶದ ಮೇರೆಗೆ ಕಾರ್ಯನಿರ್ವಹಿಸುತ್ತಿದೆಯೆಂದು ಆರೋಪ.
- ಆಪ್ ನಾಯಕರು ಮತ್ತು ತಮ್ಮ ಮೇಲೆ ಕಿರುಕುಳ ನೀಡಲು ಬಿಜೆಪಿ ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.
