ನವದೆಹಲಿ, 8 ಫೆಬ್ರವರಿ :
ಆ್ಯಂಕರ್ :ರಾಜ್ಯಗಳಿಗೆ ಅನುದಾನ ತಾರತಮ್ಯ ಸಂಬಂಧ ಮೋದಿ ಸರ್ಕಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ ಸಾರಿದ ಬೆನ್ನಲ್ಲೇ, ಕೇರಳ ಮುಖ್ಯಮಂತ್ರಿ ಕೂಡ ಇಂದು ಪ್ರತಿಭಟನೆಗೆ ಮುಂದಾಗಿದ್ದಾರೆ.
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ನೇತೃತ್ವದಲ್ಲಿ ಕ್ಯಾಬಿನೆಟ್ ಸಚಿವರು, ಶಾಸಕರು ಹಾಗೂ ಲೆಫ್ಟ್ ಡೆಮೊಕ್ರೆಟಿಕ್ ಫ್ರಂಟ್ ನ ಸಂಸದರು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ನಮ್ಮ ರಾಜ್ಯಕ್ಕೂ ಕೇಂದ್ರ ಸರ್ಕಾರ ಅನುದಾನವನ್ನು ನೀಡದೇ ತಾರತಮ್ಯ ಮಾಡುತ್ತಿದೆ. ಹಲವು ಯೋಜನೆಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ವಿಜಯನ್ ಕೇಂದ್ರದ ವಿರುದ್ಧ ಆರೋಪಿಸಿದ್ದಾರೆ ಎಂದು ಹೇಳಲಾಗಿದೆ. ಇನ್ನು ಈ ಪ್ರತಿಭಟನೆಗೆ ತಮಿಳುನಾಡು ಮುಖ್ಯಮಂತ್ರಿ ಕೂಡ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.
