ಜೈಪುರ, :ಆ್ಯಂಕರ್:ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ವಿವಿಧ ರಾಜಕೀಯ ಪಕ್ಷಗಳ ನಾಯಕರ ಚುನಾವಣಾ ಪ್ರಚಾರ ಬಿರುಸುಗೊಂಡಿದೆ.
ರಾಜಸ್ಥಾನದ ಜೈಪುರ ಗ್ರಾಮೀಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೋಟ್ಪುಟ್ಲಿಯಲ್ಲಿ ಬಿಜೆಪಿ ನಾಯಕ ಪ್ರಧಾನಿ ನರೇಂದ್ರ ಮೋದಿ ಇಂದು ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಮಧ್ಯಾಹ್ನ ೧.೩೦ ರ ಸುಮಾರಿಗೆ ಮೊಲಾಹೇರಾ ಗ್ರಾಮದಲ್ಲಿ ಸಭೆ ನಡೆಯುವ ಸ್ಥಳಕ್ಕೆ ಪ್ರಧಾನಿ ಮೋದಿ ತಲುಪಲಿದ್ದಾರೆ. ಜೈಪುರ ಗ್ರಾಮೀಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನು ಬೆಂಬಲಿಸಿ ಅವರು ಕೋಟ್ಪುಟ್ಲಿಯಲ್ಲಿ ಈ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಚುನಾವಣೆ ಘೋಷಣೆಯಾದ ನಂತರ ರಾಜಸ್ಥಾನದಲ್ಲಿ ಲೋಕಸಭಾ ಚುನಾವಣೆಗೆ ಪ್ರಧಾನಿ ಅವರ ಮೊದಲ ಸಭೆ ಇದಾಗಿದೆ. ರಾಜಸ್ಥಾನದಲ್ಲಿ ಏಪ್ರಿಲ್ ೧೯ ಮತ್ತು ೨೬ ರಂದು ಎರಡು ಹಂತಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ.
ಉತ್ತರಾಖಂಡ್ನ ರುದ್ರಾಪುರದಲ್ಲಿ ಸಹ ಇಂದು ಪ್ರಧಾನಿ ಚುನಾವಣಾ ರ್ಯಾಲಿಯನ್ನು ನಡೆಸಲಿದ್ದಾರೆ.
