ನವದೆಹಲಿ, 4 ಮಾರ್ಚ್ :
ಆ್ಯಂಕರ್:ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಭಾರತ ಪ್ರವಾಸಕ್ಕೆ ಸಿದ್ಧತೆ ನಡೆಸಿದ್ದಾರೆ.
ಮುಂದಿನ 10 ದಿನಗಳಲ್ಲಿ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ 29 ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಶನಿವಾರ ಬಿಜೆಪಿ 195 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಪ್ರಧಾನಿ ಮೋದಿ ತೆಲಂಗಾಣ, ತಮಿಳುನಾಡು, ಒಡಿಶಾ, ಪಶ್ಚಿಮ ಬಂಗಾಳ, ಬಿಹಾರ, ಜಮ್ಮು ಮತ್ತು ಕಾಶ್ಮೀರ, ಅಸ್ಸಾಂ, ಅರುಣಾಚಲಪ್ರದೇಶ, ಉತ್ತರ ಪ್ರದೇಶ, ಗುಜರಾತ್, ರಾಜಸ್ಥಾನ ಮತ್ತು ದೆಹಲಿಗೆ ಭೇಟಿ ನೀಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದಾದ ಬಳಿಕ ಅವರು ತಮಿಳುನಾಡಿನ ಕಲ್ಪಾಕ್ಕಂನಲ್ಲಿರುವ ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಗೆ ಭೇಟಿ ನೀಡಲಿದ್ದಾರೆ. ಆದಿಲಾಬಾದ್ ಹಾಗೂ ಚೆನ್ನೈನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮಾರ್ಚ್ 5 ರಂದು ತೆಲಂಗಾಣದ ಸಂಗಾರೆಡ್ಡಿಯಲ್ಲಿ ಪ್ರಧಾನಿ ಮೋದಿ ಹಲವು ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಇದಾದ ಬಳಿಕ ಒಡಿಶಾದಲ್ಲಿ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ದ್ವಾರಕಾ ಎಕ್ಸ್ಪ್ರೆಸ್ ವೇ ಮಾರ್ಚ್ 11 ರಂದು ದೆಹಲಿಯಲ್ಲಿ ನಮೋ ಡ್ರೋನ್ ದೀದಿ ಮತ್ತು ಲಖಪತಿ ದೀದಿಗೆ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ನಂತರ ದ್ವಾರಕಾದಲ್ಲಿ ಎಕ್ಸ್ ಪ್ರೆಸ್ ವೇನ ಹರ್ಯಾಣ ವಿಭಾಗವನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಸಂಜೆ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಧಾನಿ ಮೋದಿ ಮಾರ್ಚ್ 12ರಂದು ಗುಜರಾತ್ನ ಸಬರಮತಿ ಮತ್ತು ರಾಜಸ್ಥಾನದ ಪೋಖ್ರಾನ್ಗೆ ಭೇಟಿ ನೀಡಲಿದ್ದಾರೆ.
ಮಾರ್ಚ್ 13ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಗುಜರಾತ್ ಮತ್ತು ಅಸ್ಸಾಂನ ಮೂರು ಪ್ರಮುಖ ಸೆಮಿಕಂಡಕ್ಟರ್ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
