ನವದೆಹಲಿ, 16 ಫೆಬ್ರವರಿ : ಆ್ಯಂಕರ್ :
ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ ವಿದ್ಯುತ್ ಬಿಲ್ ಪಾವತಿ ಮಾಡಲೂ ಹಣವಿಲ್ಲ ಎಂದು ಕಾಂಗ್ರೆಸ್ ಕೇಂದ್ರದ ವಿರುದ್ಧ ಧ್ವನಿ ಎತ್ತಿದೆ.
ಕಾಂಗ್ರೆಸ್ ಮುಖಂಡ ಅಜಯ್ ಮಾಕನ್ ಸುದ್ದಿಗೋಷ್ಠಿಯಲ್ಲಿ ಈ ಆರೋಪ ಮಾಡಿದ್ದಾರೆ. ಭಾರತದಲ್ಲಿ ಪ್ರಜಾಪ್ರಭುತ್ವ ಸಂಪೂರ್ಣ ಅಂತ್ಯಗೊಂಡಿದೆ. ಬ್ಯಾಂಕ್ ನಲ್ಲಿ ವಿಚಾರಿಸಿದಾಗ ಕಾಂಗ್ರೆಸ್ ಪಕ್ಷದ ಎಲ್ಲಾ ಖಾತೆಗಳನ್ನು ಸ್ಥಗಿತಗೊಳಿಸಿರುವುದು ತಿಳಿದು ಬಂದಿದೆ. ಅಚ್ಚರಿಯ ಸಂಗತಿ ಎಂದರೆ ಚುನಾವಣೆ ಘೋಷಣೆಗೆ ಎರಡು ವಾರ ಬಾಕಿ ಇರುವಾಗ ನಮ್ಮ ಖಾತೆಗಳನ್ನು ಸ್ಥಗಿತ ಮಾಡಿ ಈ ಸರ್ಕಾರ ಏನು ಮಾಡಲು ಪ್ರಯತ್ನಿಸುತ್ತಿದೆ ಎಂದು ಮಾಕನ್ ಪ್ರಶ್ನಿಸಿದ್ದಾರೆ.
