ದಿಂದೋರಿ, 29 ಫೆಬ್ರವರಿ :ಆ್ಯಂಕರ್:
ಪಿಕ್-ಅಪ್ ವಾಹನವು ಚಾಲಕನ ನಿಯಂತ್ರಣ ಕಳೆದುಕೊಂಡು ಪಲ್ಟಿಯಾಗಿ ದುರಂತ ಸಂಭವಿಸಿದೆ. ಭೀಕರ ದುರ್ಘಟನೆಯಲ್ಲಿ 14 ಪ್ರಯಾಣಿಕರು ಪ್ರಾಣಬಿಟ್ಟಿದ್ದು, 20ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮಧ್ಯಪ್ರದೇಶದ ದಿಂದೋರಿಯ ಬದ್ ಝರ್ ಘಾಟ್ ನಲ್ಲಿ ದುರ್ಘಟನೆ ನಡೆದಿದೆ. ಯಾಗೊಂಡವರನ್ನು ಸ್ಥಳೀಯರು ಹಾಗೂ ಭದ್ರತಾ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಶಹಪುರ ಕಮ್ಯುನಿಟಿ ಹೆಲ್ತ್ ಕೇರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ವಿಕಾಸ್ ಮಿಶ್ರಾ ತಿಳಿಸಿದ್ದಾರೆ. ಅಪಘಾತದ ಬಗ್ಗೆ ಇನ್ನುಷ್ಟು ಮಾಹಿತಿ ತಿಳಿದುಬರಬೇಕಿದೆ.
