ಗುವಾಹಟಿ, 4 ಫೆಬ್ರವರಿ :
ಆ್ಯಂಕರ್:
ಪ್ರಧಾನಿ ನರೇಂದ್ರ ಮೋದಿ ಇಂದು ಗುವಾಹಟಿಯಲ್ಲಿ ರೋಡ್ ಶೋ ನಡೆಸಿದ್ದಾರೆ, ಅಷ್ಟೇ ಅಲ್ಲದೆ 11,600 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಗುವಾಹಟಿಯ ಖಾನಪಾರದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಕಾರ್ಯಕರ್ತರು ಒಂದು ಲಕ್ಷ ಮಣ್ಣಿನ ದೀಪಗಳನ್ನು ಬೆಳಗಿಸಿದರು.
ಪ್ರಧಾನಿ ಶನಿವಾರ ಸಂಜೆ 6.30 ರ ಸುಮಾರಿಗೆ ಒಡಿಶಾದಿಂದ ಗುವಾಹಟಿಯ ಪ್ರಸಿದ್ಧ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಲುಪಿದರು. ಇಲ್ಲಿ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ, ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ರಾಜ್ಯ ಸಚಿವರು ಮತ್ತು ಹಿರಿಯ ಪೊಲೀಸ್ ಅಧಿಕಾರಿಗಳು ಮೋದಿ ಅವರನ್ನು ಸ್ವಾಗತಿಸಿದರು.
ಇದಾದ ನಂತರ ಕೊಯಿನಾಧೋರಾ ರಾಜ್ಯ ಅತಿಥಿ ಗೃಹಕ್ಕೆ ತೆರಳಿದರು. ಅಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿಯನ್ನು ಭೇಟಿಯಾದ ಮೋದಿ ಪಕ್ಷದ ವಿಷಯಗಳ ಬಗ್ಗೆ ಚರ್ಚಿಸಿದರು.
11 ಸಾವಿರ ಕೋಟಿ ರೂ. ಯೋಜನೆಗಳ ಉದ್ಘಾಟನೆ ಬಳಿಕ ಮಾತನಾಡಿದ ಪ್ರಧಾನಿ ಮೋದಿ, ಅಸ್ಸಾಂ ಹಾಗೂ ಈಶಾನ್ಯ ದಕ್ಷಿಣ ಏಷ್ಯಾದ ಇತರೆ ದೇಶಗಳೊಂದಿಗೆ ಸಂಪರ್ಕವನ್ನು ಬಲಪಡಿಸುತ್ತದೆ. ತಾಯಿ ಕಾಮಾಕ್ಯ ಆಶೀರ್ವಾದಿಂದ ಮತ್ತೊಮ್ಮೆ ಅಸ್ಸಾಂ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳಿಗೆ ಚಾಲನೆ ನೀಡುವ ಅವಕಾಶ ಸಿಕ್ಕಿದೆ ಎಂದರು.
