ಬಾಂದರಾ,
ಆ್ಯಂಕರ್ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಬಾಂದರಾ-ಗೊಂಡಿಯಾ ಲೋಕಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಪರ ಸಾರ್ವಜನಿಕ ರ್ಯಾಲಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ನಾಗ್ಪುರದ ಛಂಬಾಲ ಛೌಕ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಹುಲ್ ಗಾಂಧಿ ನಿನ್ನೆ ತಿರುನಲ್ವೇಲಿಯಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿ, ಎನ್ ಡಿ ಎ ಸರ್ಕಾರ ಕೇವಲ ಶ್ರೀಮಂತ ಕೈಗಾರಿಕೋದ್ಯಮಿಗಳಿಗೆ ಕೇಂದ್ರೀಕೃತವಾಗಿದೆ. ಪ್ರತಿಪಕ್ಷಗಳನ್ನು ಗುರಿಯಾಗಿರಿಸಿಕೊಂಡು ಇಡಿ, ಸಿಬಿಐ ಮತ್ತು ಐಟಿಗಳನ್ನು ಬಳಸಿಕೊಳ್ಳುತ್ತಿದೆ ಎಂದು ಟೀಕಿಸಿದರು.
