ನವದಹೆಲಿ,
ಆ್ಯಂಕರ್:ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭೇಟಿಯಾಗಿ ಕಾನೂನು ನೆರವು ನೀಡುವ ಭರವಸೆ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇಂದು (ಶುಕ್ರವಾರ) ಅರವಿಂದ್ ಕೇಜ್ರಿವಾಲ್ ಅಥವಾ ಅವರ ಕುಟುಂಬವನ್ನು ಅವರು ಭೇಟಿಯಾಗುವ ಸಾಧ್ಯತೆಗಳಿವೆ.
ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಮನೆಯಲ್ಲಿ ಶೋಧ ಕಾರ್ಯ ನಡೆಸಿದ ಅಧಿಕಾರಿಗಳು, ಮಹತ್ವದ ದಾಖಲೆಗಳನ್ನು ವಶಕ್ಕೆ ಮಡೆದುಕೊಂಡರು. ಬಳಿಕ ಅವರನ್ನು ಅಧಿಕಾರಿಗಳು ಬಂಧಿಸಿ ಇಡಿ ಪ್ರಧಾನ ಕಚೇರಿಗೆ ಕರೆದುಕೊಂಡು ಹೋಗಿದ್ದಾರೆ.
ಇಡಿ ಜಾರಿಗೊಳಿಸಿದ್ದ 9 ಸಮನ್ಸ್ ಗಳಿಗೆ ಉತ್ತರಿಸದೇ, ಸತತವಾಗಿ ವಿಚಾರಣೆಗೆ ಗೈರಾಗಿದ್ದರು. ಅಲ್ಲದೇ ಅಕ್ರಮ ಹಣ ವರ್ಗಾವಣೆ ಕುರಿತಂತೆ ಜಾರಿಗೊಳಿಸಲಾಗಿದ್ದ ಸಮನ್ಸ್ ರದ್ದುಗೊಳಿಸುವಂತೆ ದೆಹಲಿ ಉಚ್ಚ ನ್ಯಾಯಾಲಯಕ್ಕೆ ಕೇಜ್ರಿವಾಲ್ ಮನವಿ ಸಲ್ಲಿಸಿದ್ದರು. ಅವರ ಮನವಿಯನ್ನು ಉಚ್ಚ ನ್ಯಾಯಾಲಯ ಪುರಸ್ಕರಿಸಲಿಲ್ಲ.
