ಗುವಾಹಟಿ, 24 ಫೆಬ್ರವರಿ :
ಆ್ಯಂಕರ್ : ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ ಬೆನ್ನಲ್ಲೇ ಅಸ್ಸಾಂ ಸರ್ಕಾರ ಕೂಡ ಇದೇ ರೀತಿಯ ಕಾನೂನನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಮೊದಲ ಹೆಜ್ಜೆ ಇಟ್ಟಿದೆ.
ಅಸ್ಸಾಂ ಕ್ಯಾಬಿನೆಟ್ ಶುಕ್ರವಾರ ಅಸ್ಸಾಂ ‘ಮುಸ್ಲಿಂ ವಿವಾಹ ಮತ್ತು ವಿಚ್ಛೇದನ ನೋಂದಣಿ ಕಾಯ್ದೆ, 1935’ ಅನ್ನು ರದ್ದುಗೊಳಿಸಿ ಆದೇಶ ಹೊರಡಿಸಿದೆ.ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಮುಸ್ಲಿಂ ವಿವಾಹಗಳು ಮತ್ತು ವಿಚ್ಛೇದನಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳು ಈಗ ವಿಶೇಷ ವಿವಾಹ ಕಾಯ್ದೆಯ ಅಡಿಯಲ್ಲಿ ಬರುತ್ತವೆ. ಸಭೆಯ ನಂತರ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ರಾಜ್ಯ ಸಚಿವ ಜಯಂತ ಮಲ್ಲಬರುವ, ಇದು ಯುಸಿಸಿ ಸಾಧಿಸುವತ್ತ ಒಂದು ಹೆಜ್ಜೆ ಎಂದು ಬಣ್ಣಿಸಿದರು.
