ದೆಹಲಿ,18 ಅಕ್ಟೋಬರ್ :
ಆ್ಯಂಕರ್ :ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಾಳೆ ಮಹಾರಾಷ್ಟ್ರದಲ್ಲಿ ವರ್ಚುವಲ್ ಮೂಲಕ ಕೇಂದ್ರದ ಮಾಜಿ ಸಚಿವ ಪ್ರಮೋದ್ ಮಹಾಜನ್ ಹೆಸರಿನ ಸುಮಾರು ೫೦೦ ಗ್ರಾಮೀಣ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಉದ್ಘಾಟಿಸಲಿದ್ದಾರೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ನಿನ್ನೆ ಸುದ್ದಿಗಾರರಿಗೆ ಈ ಮಾಹಿತಿ ನೀಡಿ, ಈ ಗ್ರಾಮೀಣ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನು ಯುವ ಉದ್ಯೋಗದ ಕೇಂದ್ರಗಳಾಗಿ ಮತ್ತು ಗ್ರಾಮೀಣ ಅಭಿವೃದ್ಧಿಗೆ ವೇಗವರ್ಧಕಗಳಾಗಿ ಒದಗಿಸಲಾಗಿದೆ ಎಂದು ಹೇಳಿದರು. ರಾಜ್ಯ ಕೌಶಲ್ಯಾಭಿವೃದ್ಧಿ ಸಚಿವ ಮಂಗಲ್ ಪ್ರಭಾತ್ ಲೋಧಾ ಮಾತನಾಡಿ, ಗ್ರಾಮೀಣ ಪ್ರದೇಶಗಳಲ್ಲಿ ಕೌಶಲ್ಯಾಭಿವೃದ್ಧಿ ಸೌಲಭ್ಯಗಳ ತುರ್ತು ಅಗತ್ಯ ಇರುವುದರಿಂದಾಗಿ ಈ ಪರಿಕಲ್ಪನೆ ಹುಟ್ಟಿಕೊಂಡಿದೆ. ಭವಿಷ್ಯದಲ್ಲಿ ಈ ಕೇಂದ್ರಗಳ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ಕೌಶಲ್ಯ ಅಭಿವೃದ್ಧಿ ಸಚಿವಾಲಯದ ಜೊತೆಗೆ, ಕಂದಾಯ, ಕೈಗಾರಿಕೆಗಳು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳು, ಶಾಲೆಗಳು, ಕಾಲೇಜುಗಳು ಮತ್ತು ಸ್ಥಳೀಯ ಪ್ರತಿನಿಧಿಗಳು ಸೇರಲಿದ್ದಾರೆ.
