ನವದೆಹಲಿ, 14 ಫೆಬ್ರವರಿ : vಆ್ಯಂಕರ್:
ಲೋಕಸಭಾ ಚುನಾವಣೆಗೂ ಮುನ್ನ ದೇಶದ ವಿವಿಧ ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆಗೆ ಬಿಜೆಪಿ ಸೇರಿದಂತೆ ವಿವಿಧ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿವೆ. ಕಾಂಗ್ರೆಸ್ ಸಂಸದೆ ಸೋನಿಯಾ ಗಾಂಧಿ ಕೂಡ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಯೊಂದು ಹೊರಬಿದ್ದಿದೆ. ಈ ಬೆನ್ನಲ್ಲೇ ಬುಧವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂಬುದಾಗಿ ವರದಿಯಾಗಿದೆ.
ಸೋನಿಯಾ ಗಾಂಧಿ ಅವರು ಈ ಬಾರಿ ರಾಜ್ಯಸಭೆಗೆ ಸಿದ್ಧರಾಗಿದ್ದಾರೆ. ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ವೇಳೆ ಸೋನಿಯಾ ಗಾಂಧಿ ಅವರ ಜೊತೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಉಪಸ್ಥಿತರಿರುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಸೋನಿಯಾ ಗಾಂಧಿ ಯಾವ ರಾಜ್ಯದಿಂದ ಸ್ಪರ್ಧಿಸುತ್ತಾರೆ ಎಂಬುದು ಇಂದು ಬೆಳಿಗ್ಗೆಯೊಳಗೆ ಅಂತಿಮ ನಿರ್ಧಾರವಾಗಲಿದೆ ಎನ್ನಲಾಗಿದೆ.
