
ಬಳ್ಳಾರಿ, 10 ಫೆಬ್ರವರಿ :
ಆ್ಯಂಕರ್: ಕಳೆದ ಒಂಭತ್ತು ತಿಂಗಳುಗಳಿಂದ ಬಳ್ಳಾರಿ ಗ್ರಾಮೀಣ ಎಸ್ಟಿ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿ ಸ್ಥಗಿತಗೊಂಡಿದ್ದು, ನೀವು ಈ ಅವಧಿಯಲ್ಲಿ ಕ್ಷೇತ್ರಕ್ಕಾಗಿ ಏನನ್ನು ಮಾಡಿದ್ದೀರಿ, ಹೇಳಿರಿ? ಎಂದು ಜಿಲ್ಲಾ ಬಿಜೆಪಿಯು ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರ ಕಚೇರಿಗೆ ಮನವಿ ಸಲ್ಲಿಸಿದೆ.
ಬಳ್ಳಾರಿ ನಗರ ಬಿಜೆಪಿ ಅಧ್ಯಕ್ಷ ಕೆ.ಬಿ. ವೆಂಕಟೇಶ್ ಅವರ ನೇತೃತ್ವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರ ಕಚೇರಿಗೆ ಮುಖಂಡರು ಶನಿವಾರ ಭೇಟಿ ನೀಡಿದಾಗ, ಸಚಿವರ ಸಹೋದರ ಬಿ. ವೆಂಕಟೇಶ ಪ್ರಸಾದ್ ಅವರು ಬಿಜೆಪಿಯ ಪತ್ರವನ್ನು ಸ್ವೀಕರಿಸಿದ್ದಾರೆ.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಮೋಕ, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್. ಗುರುಲಿಂಗನಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೋಮನಗೌಡ, ನಗರ ಪ್ರಧಾನ ಕಾರ್ಯದರ್ಶಿ ರಾಮಾಂಜಿ ಇನ್ನಿತರರು ಉಪಸ್ಥಿತರಿದ್ದರು.
