ಉನ್ನಾವೋ, 29 ಏಪ್ರಿಲ್ಆ್ಯ ಕರ್:ಬಸ್ ಹಾಗೂ ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಸಫಿಪುರದಲ್ಲಿ ನಡೆದಿದೆ. ಅಪಘಾತದಲ್ಲಿ ಆರು ಜನ ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಗಾಯಗೊಂಡಿದ್ದಾರೆ.
ಜಮಾಲ್ಪುರ ಗ್ರಾಮದ ಬಳಿಯ ಹರ್ದೋಯಿ-ಉನ್ನಾವೋ ಹೆದ್ದಾರಿಯಲ್ಲಿ ಬಸ್ಗೆ ಟ್ರಕ್ ಡಿಕ್ಕಿ ಹೊಡೆದಿದೆ. ಬಸ್ನ ಒಂದು ಬದಿ ಛಿದ್ರಗೊಂಡು ಈ ದುರಂತ ಸಂಭವಿಸಿದೆ.
ಮೊದಲು ಗಾಯಾಳುಗಳನ್ನು ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಕಾನ್ಪುರ ಮತ್ತು ಉನ್ನಾವೊಗೆ ಕಳುಹಿಸಲಾಗಿದೆ. ಪ್ರಸ್ತುತ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರನ್ನು ಗುರುತಿಸುವ ಪ್ರಯತ್ನ ನಡೆಯುತ್ತಿದ್ದು, ಟ್ರಕ್ ಚಾಲಕನನ್ನು ಬಂಧಿಸಲಾಗಿದೆ.
