ರಾಯಗಢ, 27 ಫೆಬ್ರವರಿ :ಆ್ಯಂಕರ್:
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪ್ರಶಾಂತ ಪ್ರದೇಶದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಉರಾನ್ ತಾಲೂಕಿ ಧುತಂ ಗ್ರಾಮದ ಬಳಿ ನಾಲ್ವರು ಮಕ್ಕಳು ಆಟವಾಡುತ್ತಿದ್ದ ವೇಳೆ ಡ್ಯಾಮ್ನ ಒಂದು ಬದಿ ಕುಸಿದು ಬಿದ್ದಿದೆ.
ಪರಿಣಾಮ ನಾಲ್ವರು ಮಕ್ಕಳು ಸಿಲುಕಿಕೊಂಡಿದ್ದರು. ಅದರಲ್ಲಿ ಇಬ್ಬರು ಮಕ್ಕಳು ಅಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಮಕ್ಕಳನ್ನು ರಕ್ಷಣೆ ಮಾಡಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರು ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುರ್ಘಟನೆ ಸಂಬಂಧ ಅಧಿಕಾರಿಗಳು ತನಿಖೆಗೆ ಆದೇಶ ನೀಡಿದ್ದಾರೆ.
