ನವದೆಹಲಿ, 3 ಮಾರ್ಚ್ :
ಚುನಾವಣಾ ಆಯೋಗದಿಂದ ಮುಂಬರುವ ಲೋಕಸಭೆ ಚುನಾವಣೆಯ ಘೋಷಣೆಗೆ ಮುನ್ನ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ಕೇಂದ್ರ ಸಚಿವ ಸಂಪುಟ ಸಭೆ ಕರೆದಿದ್ದು, ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವರ್ಷದ ಏಪ್ರಿಲ್-ಮೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯುವ ನಿರೀಕ್ಷೆಯಿರುವುದರಿಂದ ಈ ಸಭೆಯು ಮಹತ್ವದ್ದಾಗಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ರಾಷ್ಟ್ರ ರಾಜಧಾನಿಯ ಚಾಣಕ್ಯಪುರಿ ರಾಜತಾಂತ್ರಿಕ ಎನ್ಕ್ಲೇವ್ನಲ್ಲಿರುವ ಸುಷ್ಮಾ ಸ್ವರಾಜ್ ಭವನದಲ್ಲಿ ಬೆಳಿಗ್ಗೆ ೯.೩೦ ಕ್ಕೆ ಸಭೆ ನಡೆಯಲಿದೆ. ಬಿಜೆಪಿ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು ಮೂರನೇ ಅವಧಿಗೆ ಕೇಂದ್ರದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಸಭೆ ಮಹತ್ವ ಪಡೆದುಕೊಂಡಿದೆ. ಚುನಾವಣಾ ಆಯೋಗವು ಒಂದೆರಡು ವಾರಗಳಲ್ಲಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆಯಿದೆ.ಹಿಂದೂಸ್ತಾನ್ ಸಮಾಚಾರ್
