ನವದೆಹಲಿ,
ಆ್ಯಂಕರ್:ದೇಶದ ವಿವಿಧ ಭಾಗಗಳಲ್ಲಿ ಬೇಸಿಗೆ ಸಮಯದಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ತಾಪಮಾನ ಏರಿಕೆಯಿಂದ ಉಂಟಾಗುವ ಪರಿಣಾಮ ಬಗ್ಗೆ ಪರಾಮರ್ಶೆ ನಡೆಯಿತು ಎಂದು ಮೂಲಗಳು ತಿಳಿಸಿವೆ.
ಗ್ರಾಮೀಣ ಭಾಗದ ಜನತೆ, ಕಟ್ಟಡ ಕಾರ್ಮಿಕರು ಸೇರಿದಂತೆ ಚುನಾವಣಾ ಕಾರ್ಯದಲ್ಲಿ ಪಾಲ್ಗೊಂಡಿರುವ ಸಿಬ್ಬಂದಿ, ರಾಜಕೀಯ ಪಕ್ಷಗಳ ಜೊತೆ ಪ್ರಚಾರದಲ್ಲಿ ಪಾಲ್ಗೊಂಡಿರುವ ಕಾರ್ಯಕರ್ತರು ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರಕಾರ ಮನವಿ ಮಾಡಿದೆ.
ಜಿಲ್ಲಾಡಳಿತ ಅಗತ್ಯ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳುವಂತೆ ನಿರ್ದೇಶನ ನೀಡಿರುವ ಕೇಂದ್ರ ಸಚಿವರು ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ಸನ್ನದ್ಧುಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ
ಕೆಲವು ಚಿಕಿತ್ಸೆಗಳಿಂದ ತೊಂದರೆ ಅನುಭವಿಸುತ್ತಿರುವ ಹಿರಿಯ ನಾಗರಿಕರು ಬಿಸಿಲಿನ ವೇಳೆಯಲ್ಲಿ ಮನೆಯಿಂದ ಹೊರಗೆ ಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪೋಷಕರಲ್ಲಿ ಮನವಿ ಮಾಡಿದೆ
