ನವದಹೆಲಿ:
ಅಬಕಾರಿ ನೀತಿ ಹಗರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಆಗಿದ್ದಾರೆ. 9 ಬಾರಿ ಇಡಿ ಸಮನ್ಸ್ ಕೊಟ್ಟಿದ್ದರೂ ವಿಚಾರಣೆಗೆ ಗೈರಾಗಿದ್ದ ಕೇಜ್ರಿವಾಲ್, ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ ಉಚ್ಚ ನ್ಯಾಯಾಲಯ , ಕೇಜ್ರಿವಾಲ್ ಮನವಿ ತಿರಸ್ಕರಿಸಿತ್ತು.
ಈ ಹಿನ್ನೆಲೆಯಲ್ಲಿ ನಿನ್ನೆ ಸಂಜೆ ವೇಳೆಗೆ ದೆಹಲಿ ಮುಖ್ಯಮಂತ್ರಿ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು ಸುಮಾರು 2 ಗಂಟೆಗಳ ಕಾಲ ವಿಚಾರಣೆ ನಡೆಸಿದರು. ಬಳಿಕ ಅರವಿಂದ್ ಕೇಜ್ರಿವಾಲ್ ಅವರನ್ನುಬಂಧನ ಮಾಡಿ, ಕರೆದೊಯ್ದರು. ಇದರೊಂದಿಗೆ ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಒಟ್ಟು ಐವರನ್ನು ಬಂಧನ ಮಾಡಿದಂತಾಗಿದೆ. ಕೇಜ್ರಿವಾಲ್ ಸ್ವತಂತ್ರ ಭಾರತದ ಇತಿಹಾಸದಲ್ಲಿ ಬಂಧನಕ್ಕೊಳಗಾಗಿ ಮೊದಲ ಸೇವೆ ಸಲ್ಲಿಸುತ್ತಿರುವ ಮುಖ್ಯಮಂತ್ರಿಯಾಗಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನಿವಾಸಕ್ಕೆ ತೆರಳಿದ್ದ ಇಡಿ ಅಧಿಕಾರಿಗಳು, ವಿಚಾರಣೆ ನಡೆಸಿದರು. ಈ ವೇಳೆ ಸಮರ್ಪಕ ಉತ್ತರ ಸಿಗದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ ಕೇಜ್ರಿವಾಲ್ರನ್ನ ಬಂಧಿಸಲಾಗಿದೆ. ಈ ಎಲ್ಲಾ ಪರಿಸ್ಥಿತಿಯನ್ನ ಸೂಕ್ಷ್ಮತೆಯನ್ನು ಅರಿತ ಜಾರಿ ನಿರ್ದೇಶನಾಲಯದ ಅಧಿಕಾರಿಗಳೂ ತಡ ಮಾಡದೇ ಅರೇ ಸೇನಾ ಪಡೆಗಳ ತುಕಡಿಗಳನ್ನು ಸ್ಥಳಕ್ಕೆ ಕರೆಸಿ, ಮುಖ್ಯಮಂತ್ರಿ ನಿವಾಸದ ಸುತ್ತ 144 ಸೆಕ್ಷನ್ ಜಾರಿಗೊಳಿಸಿ ಭಾರೀ ಬಿಗಿಭದ್ರತೆಯೊಂದಿಗೆ ಕೇಜ್ರಿವಾಲ್ರನ್ನ ದೆಹಲಿ ಇಡಿ ಕಚೇರಿಗೆ ಕರೆತಂದಿದ್ದಾರೆ.
12 ಅಧಿಕಾರಿಗಳ ತಂಡವು ಸರ್ಚ್ ವಾರಂಟ್ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿದ್ದವು. ಈ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು, ಬಳಿಕ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕರೂ ಆಗಿರುವ ಕೇಜ್ರಿವಾಲ್, ಆಪಾದಿತ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನೀಡಿದ ಎಂಟು ಸಮನ್ಸ್ಗಳಿಗೂ ಸ್ಪಂದಿಸಿಲ್ಲ. ದೆಹಲಿ ಜಲ ಮಂಡಳಿಯಲ್ಲಿ ನಡೆದ ಅಕ್ರಮಗಳಿಗೆ ಸಂಬಂಧಿಸಿದ ಒಂದು ಸಮನ್ಸ್ಗೂ ಕೂಡ ಪ್ರತಿಕ್ರಿಯಿಸಿಲ್ಲ. ಒಂಬತ್ತು ಬಾರಿ ಇ.ಡಿ ಸಮನ್ಸ್ ಬಂದ ಹಿನ್ನೆಲೆ ಮಧ್ಯಂತರ ರಕ್ಷಣೆ ಕೋರಿ ಕೇಜ್ರಿವಾಲ್ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಬಂಧನದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿತ್ತು. ಕೇಜ್ರಿವಾಲ್ ಪ್ರಕರಣ ಸಂಬಂಧ ಆಮ್ ಆದ್ಮಿ ಪಾರ್ಟಿ ಸರ್ವೋಚ್ಚ ನ್ಯಾಯಾಲಯ ಮೊರೆ ಹೋಗಿದೆ.
ಪ್ರಕರಣ ಬಗ್ಗೆ ಇಡಿ ಹೇಳಿದ್ದೇನು?
ದೆಹಲಿ ಅಬಕಾರಿ ನೀತಿ ಹಗರಣದ ಬಗ್ಗೆ ಸಾಮಾನ್ಯ ಅರ್ಥದಲ್ಲಿ ಹೇಳಬೇಕು ಎಂದರೆ ಇದು ಅಬಕಾರಿ ವ್ಯವಹಾರದಲ್ಲಿ ಖಾಸಗಿ ವ್ಯಕ್ತಿಗಳಿಗೆ ಲಾಭ ಮಾಡಿಕೊಟ್ಟಿದ್ದ ನೀತಿ ಎನ್ನುವುದು ಆರೋಪ. ಖಾಸಗಿ ಸಂಸ್ಥೆಗಳು ರೀಟೇಲ್ ಲಿಕ್ಕರ್ ವಲಯಕ್ಕೆ ಪ್ರವೇಶಿಸಲು ಅನುಕೂಲ ಮಾಡಿಕೊಡುವಂತೆ ದೆಹಲಿ ಅಬಕಾರಿ ನೀತಿ 2021-22 ಅನ್ನು ಕೇಜ್ರಿವಾಲ್ ನೇತೃತ್ವದ ಎಎಪಿ ಸರ್ಕಾರ ಅನುಷ್ಠಾನಗೊಳಿಸಿದ್ದು, ಇದರಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಎಲ್-1 ಪರವಾನಗಿಯನ್ನು ಅನುಮೋದನೆ ಇಲ್ಲದೆಯೇ ವಿಸ್ತರಿಸುವಲ್ಲಿ ಲಂಚ ಪಡೆಯಲಾಗಿದೆ. ಲಂಚ ಪಡೆದು ಕಂಪೆನಿಗಳಿಗೆ ಸಾಕಷ್ಟು ಅನುಕೂಲ ಮಾಡಿಕೊಡಲಾಗಿದೆ ಎಂಬ ಗಂಭೀರ ಆರೋಪ ದೆಹಲಿ ಸರ್ಕಾರದ ಮೇಲಿದೆ. ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ, ನಂತರ ಅದನ್ನು ರದ್ದುಗೊಳಿಸಲಾಯಿತು. ಎಎಪಿ ನಾಯಕರು ಅಬಕಾರಿ ನೀತಿಯಲ್ಲಿ 100 ಕೋಟಿ ರೂಪಾಯಿ ಕಿಕ್ಬ್ಯಾಕ್ ಪಡೆದಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ.
