ನವದೆಹಲಿ, 16 ಅಕ್ಟೋಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಆಂಧ್ರ ಪ್ರದೇಶದ ಶ್ರೀಶೈಲಂ ಮತ್ತು ಕರ್ನೂಲ್ ಪ್ರದೇಶಗಳಿಗೆ ಭೇಟಿ ನೀಡಿ, ₹13,430 ಕೋಟಿ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.
ಮೋದಿಯವರು ಶ್ರೀ ಭ್ರಮರಾಂಬಾ ಮಲ್ಲಿಕಾರ್ಜುನ ಸ್ವಾಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿ, ಶಿವಾಜಿ ಮಹಾರಾಜರಿಗೆ ಸಮರ್ಪಿತ ‘ಶ್ರೀ ಶಿವಾಜಿ ಸ್ಫೂರ್ತಿ ಕೇಂದ್ರ’ ವೀಕ್ಷಿಸಲಿದ್ದಾರೆ.
ಬಳಿಕ ಕರ್ನೂಲ್‌ನಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಕೈಗಾರಿಕೆ, ರೈಲ್ವೆ, ರಸ್ತೆ, ಇಂಧನ ಮತ್ತು ರಕ್ಷಣಾ ವಲಯಗಳ ಪ್ರಮುಖ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಈ ಯೋಜನೆಗಳು ಆಂಧ್ರ ಪ್ರದೇಶದ ಮೂಲಸೌಕರ್ಯವನ್ನು ಬಲಪಡಿಸಿ, ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಮತ್ತು ರಾಜ್ಯದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ವೇಗ ನೀಡುವ ನಿರೀಕ್ಷೆಯಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
