ದೆಹಲಿ , 16ನವೆಂಬರ್ (ಹಿ.ಸ):
ಆ್ಯಂಕರ್ :ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದಿನಿಂದ ಎರಡು ದಿನಗಳ ಕಾಲ ಇಂಡೋನೇಷ್ಯಾದ ಜಕಾರ್ತಾದಲ್ಲಿ ನಡೆಯುವ ೧೦ನೇ ಆಸಿಯಾನ್ ರಕ್ಷಣಾ ಸಚಿವರ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.
ಆಸಿಯಾನ್ ರಕ್ಷಣಾ ಸಚಿವರ ಸಭೆಯ ವೇಳೆ ಸಚಿವ ರಾಜನಾಥ್ ಸಿಂಗ್, ಇತರೆ ದೇಶಗಳ ರಕ್ಷಣಾ ಸಚಿವರ ಜತೆ ದ್ವಿಪಕ್ಷೀಯ ಸಭೆಗಳನ್ನು ಸಹ ನಡೆಸಲಿದ್ದಾರೆ. ಈ ಸಭೆಗಳಲ್ಲಿ ರಕ್ಷಣಾ ಸಹಕಾರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದಾರೆ.
ಸಭೆಯ ಮೊದಲ ದಿನ, ರಕ್ಷಣಾ ಸಚಿವರು ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಭದ್ರತಾ ವಿಷಯಗಳ ಕುರಿತು ಉದ್ದೇಶಿಸಿ ಮಾತನಾಡಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
