ಶ್ರೀನಗರ್, 23ಅಕ್ಟೋಬರ್ (ಹಿ.ಸ):
ಆ್ಯಂಕರ್ :
ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನ ಗಡಿ ನಿಯಂತ್ರಣ ರೇಖೆ ಬಳಿ ಒಳನುಸುಳುವಿಕೆ ಪ್ರಯತ್ನವನ್ನು ಭದ್ರತಾ ಪಡೆಗಳು ವಿಫಲಗೊಳಿಸಿವೆ. ಈ ವೇಳೆ ಯೋಧರು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ. ಗಡಿ ನಿಯಂತ್ರಣ ರೇಖೆಯುದ್ದಕ್ಕೂ ಭಾರೀ ಶಸ್ತ್ರಾಸ್ತ್ರ ಸಜ್ಜಿತ ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಬಹುದು ಎಂದು ಗುಪ್ತಚರ ಸಂಸ್ಥೆಗಳು ಜಮ್ಮು ಮತ್ತು ಕಾಶ್ಮೀರ ಪೊಲೀಸರಿಗೆ ಮಾಹಿತಿ ನೀಡಿದ್ದವು.ಇದಾದ ಬಳಿಕ ಗಡಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿತ್ತು. ನಿರಂತರ ಮಳೆ ಕಡಿಮೆ ಗೋಚರತೆ ಹಾಗೂ ಕೆಟ್ಟ ಹವಾಮಾನದ ಲಾಭ ಪಡೆದು ಶಸ್ತ್ರಸಜ್ಜಿತ ಭಯೋತ್ಪಾದಕರು ಗಡಿ ನಿಯಂತ್ರಣ ರೇಖೆಯನ್ನು ದಾಟಲು ಪ್ರಯತ್ನಪಟ್ಟರು. ಶುಕ್ರವಾರ, ಶನಿವಾರ ಮಧ್ಯರಾತ್ರಿ ಎನ್ಕೌಂಟರ್ ನಡೆಯಿತು. ಬೆಳಗಿನ ಜಾವದವರೆಗೂ ಎನ್ಕೌಂಟರ್ ಮುಂದುವರೆದಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ.
ನಿಯಂತ್ರಣ ರೇಖೆಯ ಇನ್ನೊಂದು ಬದಿಯಲ್ಲಿದ್ದ ಭಯೋತ್ಪಾದಕರು ಎನ್ಕೌಂಟರ್ನಲ್ಲಿ ಹತರಾದ ಭಯೋತ್ಪಾದಕರ ದೇಹಗಳನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
