ದೆಹಲಿ,18 ಅಕ್ಟೋಬರ್ (ಹಿ.ಸ):
ಆ್ಯಂಕರ್ :
’ಆಪರೇಷನ್ ಅಜಯ್’ ಕಾರ್ಯಾಚರಣೆ ಮೂಲಕ ೧೮ ನೇಪಾಳಿಗರು ಸೇರಿದಂತೆ ಒಟ್ಟು ೨೮೬ ಕ್ಕೂ ಪ್ರಯಾಣಿಕರನ್ನು ಹೊತ್ತ ಐದನೇ ವಿಮಾನ, ಇಸ್ರೇಲ್ನಿಂದ ನವದೆಹಲಿಗೆ ಆಗಮಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್, ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, ವಿಮಾನ ನಿಲ್ದಾಣಕ್ಕೆ ಬಂದಿಳಿದ ಈ ಪ್ರಯಾಣಿಕರನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ.ಎಲ್.ಮುರುಗನ್ ಅವರು, ಸ್ವಾಗತಿಸಿದರು ಎಂದು ತಿಳಿಸಿದರು.
ಹಿಂದೂಸ್ತಾನ್ ಸಮಾಚಾರ್
