ದೆಹಲಿ, 7 ಜನವರಿ(ಹಿ.ಸ):
ಆ್ಯಂಕರ್ :
ಮುಂದಿನ ಎರಡು ದಿನಗಳಲ್ಲಿ ಪಂಜಾಬ್, ಹರಿಯಾಣ, ಚಂಡೀಗಢ, ದೆಹಲಿ ಮತ್ತು ರಾಜಸ್ಥಾನದಲ್ಲಿ ಶೀತದ ವಾತಾವರಣದಿಂದ ತೀವ್ರ ಶೀತ ವಾತಾವರಣ ದಿನದ ಪರಿಸ್ಥಿತಿ ಮುಂದುವರಿಯುವ ಸಾಧ್ಯತೆ ಇದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ೬ ರಿಂದ ೯ ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರುತ್ತದೆ ಎಂದು ಭಾರತ ಹವಾಮಾನ ಇಲಾಖೆ – ಐಎಂಡಿ ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ವಾಯುವ್ಯ ಭಾರತದಲ್ಲಿ ದಟ್ಟವಾದ ಮಂಜು ಮುಂದುವರಿಯುವ ಸಾಧ್ಯತೆಯಿದೆ ಮತ್ತು ನಂತರ ಕ್ರಮೇಣ ಕಡಿಮೆಯಾಗುತ್ತದೆ ಎಂದು ಇಲಾಕೆ ಮುನ್ಸೂಚನೆ ನೀಡಿದೆ.
ಹಿಂದೂಸ್ತಾನ್ ಸಮಾಚಾರ್
