



ರಾಯಚೂರು, 1 ಡಿಸೆಂಬರ್(ಹಿ.ಸ):
ಆ್ಯಂಕರ್: ಜಗತ್ತಿನಲ್ಲಿ ಪ್ರತಿಯೊಬ್ಬರಲ್ಲಿಯೂ ಒಂದಲ್ಲಾ ಒಂದು ಕಲೆ, ಪ್ರತಿಭೆ ಅಡಗಿರುತ್ತದೆ ಅಂತಹ ಪ್ರತಿಭೆಗಳನ್ನು ಮುಖ್ಯವಾಹಿನಿ ತರುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ಸಾಂಸ್ಕøತಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದ್ದು, ಕಾರಾಗೃಹದಲ್ಲಿರುವ ಬಂದೀಖಾನೆ ನಿವಾಸಿಗಳಿಗೂ ಈ ಸಾಂಸ್ಕøತಿಕ ಕಾರ್ಯಕ್ರಮವನ್ನು ಉಣಬಡಿಸುತ್ತಿರುವುದು ಅತ್ಯಂತ ಸಂತಸದ ವಿಚಾರವಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುರೇಂದ್ರಬಾಬು ಅವರು ತಿಳಿಸಿದ್ದಾರೆ.
ಜಿಲ್ಲಾ ಕಾರಾಗೃಹದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಶುಕ್ರವಾರ ಹಮ್ಮಿಕೊಂಡಿದ್ದ ಸಾಮಸ್ಕøತಿಕ ಸೌರಭ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಜೀವನದಲ್ಲಿ ಪ್ರತಿಯೊಬ್ಬರಲ್ಲಿಯೂ ಯಾವುದೋ ಒಂದು ಕಲೆ ಇದ್ದೇ ಇರುತ್ತದೆ. ಪ್ರಾಚೀನ ಕಾಲದಲ್ಲಿ ಅಂತಹ ಕಲೆಗಳನ್ನು ಪ್ರೋತ್ಸಾಹಿಸಲಾಗುತ್ತಿದ್ದು, ಅದರಂತೆ ಪ್ರಸ್ತುತ ದಿನಮಾನಗಳಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ವತಿಯಿಂದ ಕಲೆಗಳನ್ನು ಪ್ರೋತ್ಸಾಹಿಸುವ ಕಾರ್ಯವಾಗುತ್ತಿದೆ ಎಂದು ತಿಳಿಸಿದರು.
ದೈಹಿಕ ಆರೋಗ್ಯ ಎಷ್ಟು ಮುಖ್ಯವೋ ಅದೇ ರೀತಿ ಮಾನಸಿಕ ಆರೋಗ್ಯವೂ ಕೂಡ ಅಷ್ಟೆ ಮುಖ್ಯ ಆದ್ದರಿಂದ ಸಾಂಸ್ಕøತಿಕ ಕಾರ್ಯಕ್ರಮಗಳಿಂದ ಮಾನಸಿಕ ನೆಮ್ಮದಿ ಸಿಗುತ್ತದೆ. ಈ ನೆಮ್ಮದಿಯನ್ನು ಕಾರಾಗೃಹದ ಬಂದೀಖಾನೆ ನಿವಾಸಿಗಳಿಗೂ ನೀಡಲಾಗುತ್ತಿದೆ ಎಂದರು.
ಇದೇ ವೇಳೆ ಜಿಲ್ಲಾ ಕಾರಾಗೃಹದ ಸೂಪರಿಟೆಂಡೆಂಟ್ ಬಿ.ಆರ್ ಅಂದಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನುಷ್ಯ ತಪ್ಪು ಮಾಡುವುದು ಸಹಜ ಆದರೆ ಅದನ್ನು ತಿದ್ದಿ ನಡೆಯುವ ಗುಣ ಅವನಲ್ಲಿ ಹೆಚ್ಚಾಗಬೇಕು. ಕಾರಾಗೃಹದಲ್ಲಿರುವ ಬಂದೀಖಾನೆ ನಿವಾಸಿಗಳಿಗೆ ಸಾಂಸ್ಕøತಿ ಕಾರ್ಯಕ್ರಮಗಳ ಮೂಲಕ ರಂಜಿಸುತ್ತಿರುವುದು ಅತ್ಯಂತ ಶ್ಲಾಘನೀಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ.ವೆಂ ನಾಯಕ, ಗ್ರಂಥಾಲಯ ಅಧಿಕಾರಿ ನಿರ್ಮಲಾ, ಜನಶಿಕ್ಷಣ ಸಂಸ್ಥೆಯ ನಿರ್ದೇಶಕ ಸದಾನಂದ ಪೂಜಾರಿ, ಕಾರಾಗೃಹದ ಅಧಿಕಾರಿಗಳು, ಸಿಬ್ಬಂದಿಗಳು, ಬಂದೀಖಾನೆ ನಿವಾಸಿಗಳು, ಕಲಾವಿದರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
