ದೆಹಲಿ, 23 ಜನವರಿ(ಹಿ.ಸ):
ಆ್ಯಂಕರ್ :
ದೆಹಲಿ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಸೋಮವಾರ ರಾತ್ರಿ ಪ್ರಬಲವಾಗಿ ಭೂಮಿ ಕಂಪಿಸಿದೆ. ಚೀನಾದ ದಕ್ಷಿಣ ಭಾಗವಾದ ಕ್ಸಿನ್ಜಿಯಾಂಗ್ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ ಬೆನ್ನಲ್ಲೇ ದೆಹಲಿಯಲ್ಲಿಯೂ ಭೂಕಂಪನದ ಅನುಭವವಾಗಿದೆ. ಅದೃಷ್ಟವಶಾತ್, ಸಾವು-ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ.
ಪದೇಪದೆ ಭೂಮಿ ಕಂಪಿಸುತ್ತಿರುವುದರಿಂದ ಜನರಲ್ಲಿ ಆತಂಕ ಸೃಷ್ಟಿಯಾಯಿತು. ಹೀಗಾಗಿ ಜನರು ಭಯಭೀತರಾಗಿ ಮನೆಗಳಿಂದ ಹೊರಗೆ ಓಡಿಬಂದರು.
80 ಕಿಲೋಮೀಟರ್ ಆಳದಲ್ಲಿ ಭೂಕಂಪನದ ಕೇಂದ್ರ ಇತ್ತು ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದೆ
ಹಿಂದೂಸ್ತಾನ್ ಸಮಾಚಾರ್
