ನವದೆಹಲಿ, 25 ಡಿಸೆಂಬರ್(ಹಿ.ಸ):
ಆ್ಯಂಕರ್ :
ಜಗತ್ತಿನಾದ್ಯಂತ ಇಂದು ಸಡಗರ, ಸಂಭ್ರಮದಿಂದ ಕ್ರಿಸ್ಮಸ್ ಆಚರಿಸಲಾಗುತ್ತಿದೆ. ಯೇಸುಕ್ರಿಸ್ತನ ಜನ್ಮದಿನದ ಅಂಗವಾಗಿ ಪ್ರಪಂಚದಾದ್ಯಂತದ ಕ್ರಿಶ್ಚಿಯನ್ನರು ಕ್ರಿಸ್ಮಸ್ ಹಬ್ಬವನ್ನು ಆಚರಿಸುತ್ತಾರೆ. ಜಾತಿಮತ ಭೇದವನ್ನು ಮರೆತು ಅತ್ಯಂತ ಉತ್ಸಾಹದಿಂದ ಹಬ್ಬದ ಆಚರಣೆಯಲ್ಲಿ ಎಲ್ಲರೂ ಪಾಲ್ಗೊಳ್ಳುವುದು ವಿಶೇಷ. ಈ ಸಂದರ್ಭದಲ್ಲಿ, ಜನರು ಕ್ರಿಸ್ಮಸ್ ಟ್ರೀ, ಆಕಾಧ ಬುಟ್ಟಿ, ಪವಿತ್ರ ಮಾಲೆ ಧಾರಣೆ ಮೂಲಕ ಪರಸ್ಪರ ಉಡುಗೊರೆಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ. ಚರ್ಚ್ಗಳು ಈಗಾಗಲೇ ಅಲಂಕಾರದಿಂದ ಕಂಗೊಳಿಸುತ್ತಿದ್ದು, ಉಡುಗೊರೆಗಳನ್ನು ಹೊತ್ತ ಸಾಂತಾ ಕ್ಲಾಸ್ ಆಗಮನಕ್ಕೆ ಮಕ್ಕಳು ಕಾಯುತ್ತಿದ್ದಾರೆ. ಕ್ರೈಸ್ತ ಬಾಂಧವರು ಬೆಳ್ಳಿಗಿನಿಂದಲೇ ಪ್ರಾರ್ಥನೆ ಸಲ್ಲಿಸುತ್ತಿರುವ ದೃಶ್ಯ ಸಾಮಾನ್ಯವಾಗಿದೆ. ಈ ಸಂದರ್ಭದಲ್ಲಿ ಸಮಸ್ತ ಕ್ರೈಸ್ತ ಬಾಂಧವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನ್ಕರ್, ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಗಣ್ಯರು ಕ್ರಿಸ್ಮಸ್ ಹಬ್ಬದ ಶುಭ ಕೋರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
