ಅಯೋಧ್ಯೆ, 10 ಜನವರಿ(ಹಿ.ಸ):
ಆ್ಯಂಕರ್ :
ಅಯೋಧ್ಯೆಯ ರಾಮ್ಲಲ್ಲಾದಲ್ಲಿ ಇದೇ ೨೨ರಂದು ಪ್ರಾಣ ಪ್ರತಿಷ್ಠಾನಾ ಕಾರ್ಯಕ್ರಮ ನಡೆಯಲಿದ್ದು, ಅದಕ್ಕಾಗಿ ಭರದ ಸಿದ್ಧತೆಗಳು ನಡೆದಿವೆ. ಇದನ್ನು ರಾಷ್ಟ್ರೀಯ ಆಚರಣೆ ಎಂದು ಕರೆಯಲು ಉತ್ತರ ಪ್ರದೇಶ ಸರ್ಕಾರ ನಿರ್ಧರಿಸಿದೆ. ಜನವರಿ ೨೨ ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಉತ್ತರ ಪ್ರದೇಶದ ಮೂಲೆ ಮೂಲೆಗಳನ್ನು ಅಲಂಕರಿಸಲಾಗುವುದು. ಎಲ್ಲಾ ಸರ್ಕಾರಿ ಕಟ್ಟಡಗಳನ್ನು ದೀಪಾಲಂಕಾರ ಮಾಡಲಾಗುವುದು. ರಾಜ್ಯದ ಪ್ರತಿಯೊಂದು ದೇವಾಲಯಗಳಲ್ಲಿ ಸಂಜೆ ದೀಪಾವಳಿಯಂತೆ ಆಚರಿಸಲಾಗುತ್ತದೆ. ಜನವರಿ ೨೨ ಜನರಿಗೆ ಬಹಳ ವಿಶೇಷವಾಗಿರಲಿದೆ ಎಂದು ನಮ್ಮ ಪ್ರತಿನಿಧಿ ವರದಿ ಮಾಡಿದ್ದಾರೆ. ರಾಮಲಲ್ಲಾ ಪ್ರಾಣ ಪ್ರತಿಷ್ಠೆಯ ಶುಭ ದಿನ ಸಮೀಪಿಸುತ್ತಿದ್ದು, ಸಕಲ ಸಿದ್ಧತೆಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ. ಜನವರಿ ೨೨ ರಂದು ರಾಜ್ಯದಲ್ಲಿ ಯಾವುದೇ ಮದ್ಯದಂಗಡಿ ತೆರೆಯುವುದಿಲ್ಲ. ಜನವರಿ ೧೪ ರಂದು ಅಯೋಧ್ಯೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶೇಷ ಸ್ವಚ್ಛತಾ ಆಂದೋಲನಕ್ಕೆ ಚಾಲನೆ ನೀಡಲಿದ್ದು, ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಅದೇ ರೀತಿ ಮಾಡಲಾಗುವುದು. ನಿನ್ನೆ ಅಯೋಧ್ಯೆಯಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಜನವರಿ ೨೨ ರಂದು ಅಯೋಧ್ಯೆಯಲ್ಲಿ ಪ್ರವಾಸಿಗರು ಮತ್ತು ಆಹ್ವಾನಿತರಿಗೆ ಸಹಾಯ ಮಾಡುವ ವಿಶೇಷ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದರು.
ಹಿಂದೂಸ್ತಾನ್ ಸಮಾಚಾರ್
