ಗಾಂಧಿನಗರ,24ನವೆಂಬರ್ (ಹಿ.ಸ):
ಆ್ಯಂಕರ್ :
ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು ಗುಜರಾತಿನ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ ಜಾಗತಿಕ ವೃತ್ತಿಪರ ಲೆಕ್ಕಪರಿಶೋಧಕರ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
ಮೂರು ದಿನಗಳ ಕಾಲ ನಡೆಯಲಿರುವ ಈ ಸಮಾವೇಶದಲ್ಲಿ ೨೫ ದೇಶಗಳ ೪೦೦೦ ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುತ್ತಾರೆ ಮತ್ತು ಜಾಗತಿಕ ಮಟ್ಟದಲ್ಲಿ ಅಕೌಂಟೆನ್ಸಿ ವೃತ್ತಿಯ ಭವಿಷ್ಯವನ್ನು ರೂಪಿಸಲು ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹಾಗೂ ಐಸಿಎಐ ಅಧ್ಯಕ್ಷ ಅನಿಕೇತ್ ಸುನಿಲ್ ತಲಾಟಿ ಉದ್ಘಾಟನಾ ಅಧಿವೇಶನದಲ್ಲಿ ಉಪಸ್ಥಿತರಿರುವರು. ಮೂರು ದಿನಗಳ ಅವಧಿಯಲ್ಲಿ ೩೦ಕ್ಕೂ ಹೆಚ್ಚು ಚರ್ಚಾಗೋಷ್ಠಿ ನಡೆಯುವ ಸಾಧ್ಯತೆ ಇದೆ.
ಗುಜರಾತ್ನ ಶಿಕ್ಷಣ ಸಚಿವ ಪ್ರಫುಲ್ ಪನ್ಶೇರಿಯಾ, ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದೇಬಾಶಿಸ್ ಪಾಂಡಾ ಸೇರಿದಂತೆ ಖ್ಯಾತ ಭಾಷಣಕಾರರು ತಮ್ಮ ಅಭಿಪ್ರಾಯ ಹಂಚಿಕೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
