• English
  • Hindi
  • Punjabi
  • Marathi
  • German
  • Gujarati
  • Urdu
  • Telugu
  • Bengali
  • Kannada
  • Odia
  • Assamese
  • Nepali
  • Spanish
  • French
  • Japanese
  • Arabic
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
Notification
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Home
  • Noida
  • Breaking
  • National
    • New India
  • International
  • Entertainment
  • Crime
  • Business
  • Sports
  • Noida
  • Breaking
  • National
  • International
  • Entertainment
  • Crime
  • Business
  • Sports
CliQ INDIA Sites > CliQ INDIA Kannada > National > ಜಾತಿ ಆಧಾರಿತವಾಗಿ ಮುಖ್ಯಮಂತ್ರಿ ಪಟ್ಟ ಹಂಚಿದ ಬಿಜೆಪಿ!
National

ಜಾತಿ ಆಧಾರಿತವಾಗಿ ಮುಖ್ಯಮಂತ್ರಿ ಪಟ್ಟ ಹಂಚಿದ ಬಿಜೆಪಿ!

CliQ INDIA
Last updated: December 13, 2023 4:30 pm
CliQ INDIA
Share
2 Min Read
SHARE

ದೆಹಲಿ, 13ಡಿಸೆಂಬರ್(ಹಿ.ಸ):

ಆ್ಯಂಕರ್ :

ಛತ್ತೀಸ್ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ಮುಖ್ಯಮಂತ್ರಿಗಳನ್ನಾಗಿ ಹೊಸಬರನ್ನು ಬಿಜೆಪಿ ನೇಮಕ ಮಾಡಿದ್ದು, ಇವರ ಆಯ್ಕೆಯ ಹಿಂದೆ ದೊಡ್ಡ ಮಟ್ಟದ ರಾಜಕೀಯ ಲೆಕ್ಕಾಚಾರವಿದೆ ಎನ್ನಲಾಗುತ್ತಿದೆ. ಆದರೆ ಹೊಸಬರ ಆಯ್ಕೆಯಿಂದ ದಶಕಗಳ ಕಾಲ ಬಿಜೆಪಿಯಲ್ಲಿ ಪ್ರಾಬಲ್ಯ ಸಾಧಿಸಿದ್ದ ಮೂವರು ನಾಯಕರು ನೇಪಥ್ಯಕ್ಕೆ ಸರಿದಂತಾಗಿದೆ.

ಅಟಲ್ ಬಿಹಾರಿ ವಾಜಪೇಯಿ ಹಾಗೂ ಎಲ್.ಕೆ. ಅಡ್ವಾಣಿ ಕಾಲದಿಂದ ಈ ಮೂರು ರಾಜ್ಯಗಳಲ್ಲಿ ಚುಕ್ಕಾಣಿ ಹಿಡಿದಿದ್ದ ರಮಣ್ ಸಿಂಗ್ (ಛತ್ತೀಸ್ಗಢ), ಶಿವರಾಜ ಸಿಂಗ್ ಚೌಹಾಣ್ (ಮಧ್ಯಪ್ರದೇಶ) ಹಾಗೂ ವಸುಂಧರಾ ರಾಜೇ (ರಾಜಸ್ಥಾನ) ಅವರ ರಾಜ್ಯ ರಾಜಕೀಯ ಅಂತ್ಯದತ್ತ ಸಾಗಲು ಮುನ್ನುಡಿ ಬರೆಯಲಾಗಿದೆ ಎಂದು ಹೇಳಲಾಗುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 3 ರಾಜ್ಯಗಳಿಗೂ ಹೊಸ ಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ ಜಾತಿ ರಾಜಕಾರಣದ ಸಮೀಕರಣ ಸಾಧಿಸಿರುವುದು ಸ್ಪಷ್ಟವಾಗಿ ಕಾಣುತ್ತಿದೆ.

ಛತ್ತೀಸ್ಗಢಕ್ಕೆ ಆದಿವಾಸಿ ಸಿಎಂ: ಛತ್ತೀಸ್ಗಢದಲ್ಲಿ ಆದಿವಾಸಿ ಸಮುದಾಯಕ್ಕೆ ಸೇರಿದವರ ಪ್ರಮಾಣ ಶೇ.32ರಷ್ಟಿದೆ. ಹೀಗಾಗಿಯೇ ಇಲ್ಲಿ ಇದೇ ಸಮುದಾಯಕ್ಕೆ ಸೇರಿದ ವಿಷ್ಣುದೇವ ಸಾಯಿ ಅವರನ್ನು ಮುಖ್ಯಮಂತ್ರಿಯನ್ನಾಗಿ ನೇಮಕ ಮಾಡಲಾಗಿದೆ. ಅಲ್ಲದೇ ಆದಿವಾಸಿ ಪ್ರಾಬಲ್ಯವಿರುವ ಸರ್ಗುಜಾ ಮತ್ತು ಬಸ್ತಾರ್ನಲ್ಲಿನ 26 ಕ್ಷೇತ್ರಗಳಲ್ಲಿ ಬಿಜೆಪಿ 22ರಲ್ಲಿ ಜಯಿಸಿದೆ. ಅಲ್ಲದೇ ಛತ್ತೀಸ್ಗಢದ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳನ್ನು ಸೇರಿಸಿದರೆ ಬುಡಕಟ್ಟು ಪ್ರಾಬಲ್ಯವಿರುವ 75 ಲೋಕಸಭಾ ಕ್ಷೇತ್ರಗಳಿವೆ. ಇದನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಈ ಆಯ್ಕೆಯನ್ನು ಮಾಡಿದೆ.

ಮಧ್ಯಪ್ರದೇಶಕ್ಕೆ ಯಾದವ ಸಿಎಂ: ದೇಶದ ಹೃದಯ ಭಾಗವಾದ ಮಧ್ಯಪ್ರದೇಶದಲ್ಲಿ ಯಾದವ ಸಮುದಾಯದ ಮುಖ್ಯಮಂತ್ರಿಗೆ ಬಿಜೆಪಿ ಮಣೆ ಹಾಕಿದೆ. ಇದರೊಂದಿಗೆ ದಲಿತ ಹಾಗೂ ಬ್ರಾಹ್ಮಣ ಸಮುದಾಯಕ್ಕೆ ಸೇರಿದ ಇಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಲಾಗಿದೆ. ಯಾದವ ಸಮುದಾಯಕ್ಕೆ ಸೇರಿದವರ ಸಂಖ್ಯೆ ಉತ್ತರಪ್ರದೇಶ ಮತ್ತು ಬಿಹಾರದಲ್ಲೂ ಹೆಚ್ಚಿನ ಪ್ರಮಾಣದಲ್ಲಿದ್ದು, ಈ ರಾಜ್ಯಗಳು ಒಟ್ಟು 120 ಸಂಸತ್ ಸ್ಥಾನವನ್ನು ಒಳಗೊಳ್ಳುತ್ತವೆ. ಮುಂದಿನ ಚುನಾವಣೆಯಲ್ಲೂ ಹಿಂದಿ ಬಾಹುಳ್ಯದ ಈ ರಾಜ್ಯಗಳನ್ನು ಗೆಲ್ಲುವ ಯೋಜನೆಯನ್ನು ಬಿಜೆಪಿ ಹಾಕಿಕೊಂಡಿದೆ. ಅಲ್ಲದೇ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಮತ್ತು ಬಿಹಾರದಲ್ಲಿ ತೇಜಸ್ವಿ ಯಾದವ್ಗೆ ವಿರುದ್ಧವಾಗಿ ಮತಗಳಿಸಲು ಇದು ಬಿಜೆಪಿಗೆ ಸಹಾಯ ಮಾಡಲಿದೆ. ಮೋಹನ್ ಯಾದವ್ ಹೊಸ ಸಿಎಂ ಆಗಿದ್ದಾರೆ.

ರಾಜಸ್ಥಾನಕ್ಕೆ ಬ್ರಾಹ್ಮಣ ಸಿಎಂ: ರಾಜಸ್ಥಾನದಲ್ಲಿ ಬ್ರಾಹ್ಮಣ ಸಮುದಾಯದ ಪ್ರಮಾಣ ಶೇ.7ರಷ್ಟಿದ್ದು, ಇದೇ ಸಮುದಾಯದ ಭಜನ್ಲಾಲ್ ಶರ್ಮಾ ಅವರನ್ನು ಮುಖ್ಯಮಂತ್ರಿ ಮಾಡಲಾಗಿದೆ. ಉಳಿದಂತೆ ರಜಪೂತ ಮತ್ತು ದಲಿತ ಸಮುದಾಯದ ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಲಾಗಿದೆ. ರಾಜಸ್ಥಾನದಲ್ಲಿ ಬ್ರಾಹ್ಮಣ ಸಮುದಾಯದವರು ಪ್ರಭಾವಿಗಳಾಗಿದ್ದು, ಈ ಸಮುದಾಯದ ಮುಖ್ಯಮಂತ್ರಿ ಬಿಜೆಪಿಗೆ ಮುಂದಿನ ಚುನಾವಣೆಯಲ್ಲಿ ಮತ ತಂದುಕೊಡಬಹುದು. ಅಲ್ಲದೇ ಇದು ಹರ್ಯಾಣ ರಾಜ್ಯದ ಮೇಲೂ ಪ್ರಭಾವ ಬೀರಲಿದ್ದು, ಛತ್ತೀಸ್ಗಢ, ಮಧ್ಯಪ್ರದೇಶ ಸೇರಿ 145 ಸಂಸದರು ಆಯ್ಕೆಯಾಗಲಿದ್ದು, ಇದರಲ್ಲಿ 114 ಮಂದಿ ಸಾಮಾನ್ಯ ವರ್ಗಕ್ಕೆ ಸೇರಿದವರಾಗಲಿದ್ದಾರೆ. ಇದು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ತಂದುಕೊಡಲಿದೆ.

ಹಿಂದೂಸ್ತಾನ್ ಸಮಾಚಾರ್

You Might Also Like

ಸುವರ್ಣ ಮಹೋತ್ಸವ ಸಮಾರಂಭದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ
ಹಸಿರು ಇಂಧನ ಸಾಮರ್ಥ್ಯದಲ್ಲಿ ಭಾರತದ ಐತಿಹಾಸಿಕ ಮೈಲಿಗಲ್ಲು
ಭಾರತೀಯ ನೌಕಾಪಡೆ ಹಿಂದೂ ಮಹಾಸಾಗರದ ರಕ್ಷಕ : ಪ್ರಧಾನಿ
ಹಿಂದೂಸ್ಥಾನ ಸಮಾಚಾರ್ ವತಿಯಿಂದ ತುರ್ತು ಪರಿಸ್ಥಿತಿಯ 50ನೇ ವಾರ್ಷಿಕೋತ್ಸವ
ಭಾರತದಲ್ಲಿನ ಅನೇಕ ಸರ್ಕಾರಿ ಕಟ್ಟಡಗಳಿಗೆ ಹುಸಿ ಬಾಂಬ್ ಬೆದರಿಕೆಗಳು ಬರುತ್ತವೆ

Sign Up For Daily Newsletter

Be keep up! Get the latest breaking news delivered straight to your inbox.
[mc4wp_form]
By signing up, you agree to our Terms of Use and acknowledge the data practices in our Privacy Policy. You may unsubscribe at any time.
Share This Article
Facebook Whatsapp Whatsapp Telegram Copy Link Print
Share
What do you think?
Love0
Sad0
Happy0
Angry0
Wink0
Previous Article ಮಹಾದೇವ್ ಬೆಟ್ಟಿಂಗ್ ಆಪ್ ಮಾಲೀಕ ರವಿ ಉಪ್ಪಲ್ ದುಬೈನಲ್ಲಿ ಬಂಧನ
Next Article ಕರಾವಳಿ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಉತ್ತರ ಭಾಗದಲ್ಲಿ ಮುಂದುವರಿದ ಒಣಹವೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

FacebookLike
XFollow
InstagramFollow
YoutubeSubscribe
- Advertisement -
Ad imageAd image

Latest News

ರೂಪಾಯಿ ಕುಸಿತ ಮತ್ತು ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಗಳ ಮಧ್ಯೆ ಭಾರತೀಯ ಷೇರು ಮಾರುಕಟ್ಟೆಗಳು ಕೆಂಪು ಬಣ್ಣದಲ್ಲಿ ತೆರೆದಿವೆ
Business
May 23, 2026
ಮಹಾರಾಷ್ಟ್ರದ ಕ್ರಮದ ನಂತರ ವಾಯುಯಾನ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಲು ಕಾಂಗ್ರೆಸ್ ಆಡಳಿತದ ರಾಜ್ಯಗಳಿಗೆ ಕೇಂದ್ರ ಒತ್ತಾಯಿಸಿದೆ
National
May 23, 2026
ಆರ್ಥಿಕವಾಗಿ ಮುಂದುವರಿದ ಒಬಿಸಿ ಕುಟುಂಬಗಳಿಗೆ ಮೀಸಲಾತಿ ಸೌಲಭ್ಯ ಮುಂದುವರಿಕೆ ಬಗ್ಗೆ ಸುಪ್ರೀಂ ಕೋರ್ಟ್ ಪ್ರಶ್ನೆ
National
May 23, 2026
ಲಕ್ನೋ ಸೂಪರ್ ಜೈಂಟ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಐಪಿಎಲ್ 2026ರ ಸ್ಪರ್ಧೆಗೆ ಸಿದ್ಧತೆ ನಡೆಸುತ್ತಿವೆ.
Sports
May 23, 2026

//

We are rapidly growing digital news startup that is dedicated to providing reliable, unbiased, and real-time news to our audience.

We are rapidly growing digital news startup that is dedicated to providing reliable, unbiased, and real-time news to our audience.

Sign Up for Our Newsletter

Sign Up for Our Newsletter

Subscribe to our newsletter to get our newest articles instantly!

Follow US

Follow US

© 2025 cliQ India. All Rights Reserved.

CliQ INDIA Kannada
  • English – अंग्रेज़ी
  • Hindi – हिंदी
  • Punjabi – ਪੰਜਾਬੀ
  • Marathi – मराठी
  • German – Deutsch
  • Gujarati – ગુજરાતી
  • Urdu – اردو
  • Telugu – తెలుగు
  • Bengali – বাংলা
  • Kannada – ಕನ್ನಡ
  • Odia – ଓଡିଆ
  • Assamese – অসমীয়া
  • Nepali – नेपाली
  • Spanish – Española
  • French – Français
  • Japanese – フランス語
  • Arabic – فرنسي
Welcome Back!

Sign in to your account

Username or Email Address
Password

Lost your password?