
ದೆಹಲಿ, 6 ಜನವರಿ(ಹಿ.ಸ):
ಆ್ಯಂಕರ್ :
ರಾಜಸ್ತಾನದ ಜೈಪುರದಲ್ಲಿ ನಡೆಯುತ್ತಿರುವ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರ ಮೂರು ದಿನಗಳ ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮದಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಪ್ರಧಾನಿ ಅವರು, ನಿನ್ನೆ ಸಂಜೆಯೇ ಜೈಪುರಕ್ಕೆ ಆಗಮಿಸಿದ್ದಾರೆ. ಮೂರು ದಿನಗಳ ಈ ಸಮ್ಮೇಳನದಲ್ಲಿ ಆಂತರಿಕ ಭದ್ರತೆ, ಸೈಬರ್ ಅಪರಾಧ ತಡೆ, ಆಧುನಿಕ ತಂತ್ರಜ್ಞಾನದ ಜೊತೆಗೆ ಭಯೋತ್ಪಾದನೆಯ ನಿಗ್ರಹಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು, ಜೈಲುಗಳ ಸುಧಾರಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಮಾಲೋಚನೆ ನಡೆಸಲಾಗುತ್ತಿದೆ. ಭದ್ರತಾ ವಿಷಯದಲ್ಲಿ ತೆಗೆದುಕೊಳ್ಳಬೇಕಾದ ಕ್ರಮ ಹಾಗೂ ನೂತನ ತಂತ್ರಜ್ಞಾನ ಅಳವಡಿಕೆ ಬಗ್ಗೆ ತಜ್ಞರು ಉನ್ನತಾಧಿಕಾರಿಗಳಿಗೆ ಆಧುನಿಕ ತಂತ್ರಜ್ಞಾನದ ಮೂಲಕ ಪರ್ಯಾಯ ಸೂತ್ರವನ್ನು ಪ್ರಕಟಿಸಲಾಗುತ್ತದೆ. ನಾಳೆ ನಡೆಯಲಿರುವ ಸಮ್ಮೇಳನದ ಸಮಾರೋಪದಲ್ಲಿಯೂ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
