ನವದೆಹಲಿ, 3 ಡಿಸೆಂಬರ್(ಹಿ.ಸ):
ಆ್ಯಂಕರ್ :
ಚುನಾವಣೆ ನಡೆದ 5 ರಾಜ್ಯಗಳ ಪೈಕಿ ಇಂದು 4 ರಾಜ್ಯಗಳಿಗೆ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಮಿಜೋರಾಂ ರಾಜ್ಯದಲ್ಲಿ ನಾಳೆ ಮತಗಳ ಎಣಿಕೆಯಾಗಲಿದೆ. ಇಂದು ತೆಲಂಗಾಣ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ಛತ್ತೀಸ್ಗಢದಲ್ಲಿ ಮಾತ್ರ ವಿಧಾನಸಭೆ ಚುನಾವಣಾ ಫಲಿತಾಂಶ ಹೊರ ಬೀಳಲಿದೆ. ಕೆಲವೇ ಗಂಟೆಗಳಲ್ಲಿ ಯಾವ ರಾಜ್ಯ ಯಾರ ತೆಕ್ಕೆಗೆ ಎಂಬ ನಿರ್ಧಾರವಾಗಲಿದೆ.ಬೆಳಿಗ್ಗೆ 8 ಗಂಟೆಗೆ ಮತ ಏಣಿಕೆ ಆರಂಭಗೊಂಡಿದೆ.
ಹಿಂದೂಸ್ತಾನ್ ಸಮಾಚಾರ್
