ನವದೆಹಲಿ, 4 ನವೆಂಬರ್ (ಹಿ.ಸ):
ಆ್ಯಂಕರ್ : ನೇಪಾಳದಲ್ಲಿ ಸಂಭವಿಸಿದ ಭೂಕಂಪದಿಂದ ಉಂಟಾದ ಜೀವಹಾನಿ ಮತ್ತು ಹಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂತಾಪ ವ್ಯಕ್ತಪಡಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ರಾಜಧಾನಿ ಕಠ್ಮಂಡು ಹಾಗೂ ಪಶ್ಚಿಮ ರುಕುಂ, ಜಾಜರಕೋಟ್ ಸೇರಿದಂತೆ ಹಲವೆಡೆ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಕನಿಷ್ಠ 128 ಜನರು ಸಾವನ್ನಪ್ಪಿದ್ದಾರೆ. 140 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ನೇಪಾಳಕ್ಕೆ ಸಾಧ್ಯವಿರುವ ಎಲ್ಲ ನೆರವು ನೀಡಲು ಭಾರತ ಸಿದ್ಧವಿದೆ ಎಂದು ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
