ನವದೆಹಲಿ, 01 ಜನವರಿ (ಹಿ.ಸ.) :
ಆ್ಯಂಕರ್ : 2026ರ ಹೊಸ ವರ್ಷದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಗುರುವಾರ ದೇಶದ ಜನತೆಗೆ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಮುಂಬರುವ ವರ್ಷವು ಎಲ್ಲರಿಗೂ ಉತ್ತಮ ಆರೋಗ್ಯ, ಸಮೃದ್ಧಿ ಹಾಗೂ ಯಶಸ್ಸನ್ನು ತಂದುಕೊಡಲಿ ಎಂದು ಅವರು ಆಶಿಸಿದ್ದಾರೆ.
ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸನಲ್ಲಿ ಪ್ರಕಟಿಸಿದ ಸಂದೇಶದಲ್ಲಿ ಪ್ರಧಾನಿ ಮೋದಿ, ಹೊಸ ವರ್ಷವು ಜನರ ಎಲ್ಲ ಪ್ರಯತ್ನಗಳಲ್ಲಿ ಯಶಸ್ಸು ಹಾಗೂ ತಮ್ಮ ಕೆಲಸದಲ್ಲಿ ತೃಪ್ತಿಯನ್ನು ನೀಡಲಿ ಎಂದು ಹೇಳಿದರು. ಸಮಾಜದಲ್ಲಿ ಶಾಂತಿ ಮತ್ತು ಸಮೃದ್ಧಿ ನೆಲೆಸಲೆಂದು ಪ್ರಾರ್ಥಿಸಿದ್ದಾರೆ.
ಹೊಸ ವರ್ಷವು ನವೀಕೃತ ಶಕ್ತಿ, ಹೊಸ ಸಂಕಲ್ಪಗಳು ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಅವಕಾಶವಾಗುತ್ತದೆ ಎಂದು ಪ್ರಧಾನಿ ಅಭಿಪ್ರಾಯಪಟ್ಟರು. 2026ನೇ ವರ್ಷವು ದೇಶ ಮತ್ತು ಸಮಾಜಕ್ಕೆ ಸಂತೋಷ, ಶಾಂತಿ ಹಾಗೂ ಪ್ರಗತಿಯ ದಾರಿಯನ್ನು ತೆರೆದುಕೊಡಲಿ ಎಂದು ಅವರು ಹಾರೈಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
