
ನವದೆಹಲಿ, 2 ಡಿಸೆಂಬರ್(ಹಿ.ಸ):
ಆ್ಯಂಕರ್ :
ದುಬೈಗೆ ಒಂದು ದಿನದ ಪ್ರವಾಸ ಕೈಗೊಂಡಿದ್ದ ಪ್ರಧಾನಿ ನರೇಂದ್ರ ಮೋದಿ, ತಡರಾತ್ರಿ ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಯುಎಇನಲ್ಲಿ ನಿನ್ನೆ ಸಂಜೆ ಅವರು, ಕಾಪ್-೨೮ ವಿಶ್ವ ಹವಾಮಾನ ಕಾರ್ಯ ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಜಾಗತಿಕ ದಕ್ಷಿಣದ ದೇಶಗಳ ಮೇಲೆ ಹವಾಮಾನ ಬದಲಾವಣೆಯು ಗಂಭೀರ ಪ್ರಭಾವ ಬೀರಿದೆ. ಜಾಗತಿಕ ದಕ್ಷಿಣದ ಆಕಾಂಕ್ಷೆಗಳನ್ನು ಪೂರೈಸಲು ಹವಾಮಾನ ಹಣಕಾಸು ಮತ್ತು ತಂತ್ರಜ್ಞಾನದ ಅತ್ಯಗತ್ಯವಿದೆ ಎಂದು ತಿಳಿಸಿದರು. ಭಾರತ ಸೇರಿದಂತೆ ಜಾಗತಿಕ ದಕ್ಷಿಣ ಭಾಗದ ದೇಶಗಳು, ಹವಾಮಾನ ಬದಲಾವಣೆಯಲ್ಲಿ ಸಣ್ಣಪಾತ್ರ ವಹಿಸುತ್ತಿವೆ. ಆದರೆ ಹವಾಮಾನ ಬದಲಾವಣೆಯ ಪರಿಣಾಮ ಅಪಾರವಾಗಿದೆ ಎಂದು ನರೇಂದ್ರ ಮೋದಿ ಹೇಳಿದರು.
ಹಿಂದೂಸ್ತಾನ್ ಸಮಾಚಾರ್
