ನವದೆಹಲಿ, 09 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಪ್ರಧಾನಿ ನರೇಂದ್ರ ಮೋದಿ ಇಂದು ಪಂಜಾಬ್ ಮತ್ತು ಹಿಮಾಚಲ ಪ್ರದೇಶಗಳಿಗೆ ಭೇಟಿ ನೀಡಿ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಪ್ರಧಾನಿ ಹಾನಿ–ಪರಿಹಾರ ಕಾರ್ಯಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ.
ರಾಜ್ಯದ 2 ಸಾವಿರ ಹಳ್ಳಿಗಳ 3.87 ಲಕ್ಷಕ್ಕೂ ಹೆಚ್ಚು ಜನರು ಪ್ರವಾಹದಿಂದ ತೊಂದರೆ ಅನುಭವಿಸಿದ್ದು, ಸಾವಿನ ಸಂಖ್ಯೆ 51ಕ್ಕೆ ಏರಿದೆ. ಸೇನೆ ಮತ್ತು ಸ್ಥಳೀಯರು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಪರಿಸ್ಥಿತಿ ನಿಧಾನವಾಗಿ ಸಾಮಾನ್ಯವಾಗುತ್ತಿದ್ದು, ಶಾಲೆ–ಕಾಲೇಜುಗಳನ್ನು ಮತ್ತೆ ತೆರೆಯಲು ಸೂಚಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
