
ನವದೆಹಲಿ,20ನವೆಂಬರ್ (ಹಿ.ಸ):
ಆ್ಯಂಕರ್ :ಭಾರತ ಮತ್ತು ಆಸ್ಟ್ರೇಲಿಯಾ ರಕ್ಷಣಾ ಸಚಿವರ ಮತ್ತು ವಿದೇಶಾಂಗ ಸಚಿವರ ಮಟ್ಟದ ೨ನೇ ಮಾತುಕತೆ ನವದೆಹಲಿಯಲ್ಲಿಂದು ನಡೆಯಲಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್ ಆಸ್ಟ್ರೇಲಿಯಾದ ಉಪಪ್ರಧಾನಿ ಹಾಗೂ ರಕ್ಷಣಾ ಸಚಿವ ರಿಚರ್ಡ್ ಮಾರ್ಲ್ಸ್ ಮತ್ತು ವಿದೇಶಾಂಗ ಖಾತೆ ಸಚಿವ ಪೆನ್ನಿ ವೊಂಗ್ ಅವರೊಂದಿಗೆ ಸಭೆ ನಡೆಸಲಿದ್ದಾರೆ. ತಂತ್ರಗಾರಿಕೆ, ರಕ್ಷಣೆ, ಭದ್ರತೆ ಸೇರಿದಂತೆ ಹಲವು ವಿಷಯಗಳ ಕುರಿತು ಎರಡೂ ದೇಶಗಳ ಸಚಿವರುಗಳು ಮಾತುಕತೆ ನಡೆಸುವ ನಿರೀಕ್ಷೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಉಭಯ ಹಿತಾಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳನ್ನು ಚರ್ಚಿಸಿ ಸಹಕಾರದ ಬಲವರ್ಧನೆ ಸಂಬಂಧ ಪರಸ್ಪರ ಅಭಿಪ್ರಾಯಗಳನ್ನು ಹಂಚಿಕೊಂಡು ಸಮಗ್ರ ಆರ್ಥಿಕ ಸಹಕಾರ ಒಪ್ಪಂದದ ಪ್ರಗತಿ ಪರಾಮರ್ಶೆ ನಡೆಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಹಿಂದೂಸ್ತಾನ್ ಸಮಾಚಾರ್
