ದೆಹಲಿ, 21 ಡಿಸೆಂಬರ್(ಹಿ.ಸ):
ಆ್ಯಂಕರ್ :
ಭಾರತೀಯ ಕುಸ್ತಿ ಫೆಡರೇಷನ್ ಚುನಾವಣೆಗೆ ಇಂದು (ಗುರುವಾರ) ಮತದಾನ ನಡೆದಿದ್ದು, ಅಧ್ಯಕ್ಷ ಸ್ಥಾನಕ್ಕೆ ಸಂಜಯ್ ಸಿಂಗ್ ಆಯ್ಕೆ ಆಗಿದ್ದಾರೆ. ಈ ಹಿಂದೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದು ವಿವಾದಕ್ಕೀಡಾಗಿದ್ದ ಡಬ್ಲ್ಯುಎಫ್ಐನ ನಿರ್ಗಮಿತ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತರಾಗಿದ್ದಾರೆ ಸಂಜಯ್ ಸಿಂಗ್ . ಅಧ್ಯಕ್ಷ ಸ್ಥಾನಕ್ಕೆ ಕಾಮನ್ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಅನಿತಾ ಶೆರಾನ್ ಮತ್ತು ಸಂಜಯ್ ನಡುವೆ ಪೈಪೋಟಿ ನಡೆದಿತ್ತು.
ಹಿಂದೂಸ್ತಾನ್ ಸಮಾಚಾರ್
