ಅಯೋಧ್ಯೆ, 30 ಡಿಸೆಂಬರ್(ಹಿ.ಸ):
ಆ್ಯಂಕರ್ :
: ಪ್ರಧಾನಿ ನರೇಂದ್ರ ಮೋದಿ ಇಂದು (ಶನಿವಾರ) ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಿರುವ ‘ಮಹರ್ಷಿ ವಾಲ್ಮೀಕಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಅಯೋಧ್ಯಧಾಮ’ ಎಂದು ಹೆಸರಿಡಲಾದ ವಿಮಾನ ನಿಲ್ದಾಣ ಉದ್ಘಾಟಿಸಿದ್ದಾರೆ. ಅಯೋಧ್ಯೆ ವಿಮಾನ ನಿಲ್ದಾಣವು ಇಂದಿನಿಂದ (ಡಿಸೆಂಬರ್ 30)ದ ಕಾರ್ಯನಿರ್ವಹಿಸಲು ಸಿದ್ಧವಾಗಿದೆ. ವಿಮಾನ ನಿಲ್ದಾಣದ ಮೊದಲ ಹಂತದ ನಿರ್ಮಾಣಕ್ಕೆ ಅಂದಾಜು 1,450 ಕೋಟಿ ರೂ. ಖರ್ಚಾಗಿದೆ.
ಸರ್ಕಾರದ ಪ್ರಕಟಣೆ ಪ್ರಕಾರ, ವಿಮಾನ ನಿಲ್ದಾಣವು 2200 ಮೀಟರ್ ಉದ್ದದ ರನ್ ವೇ ಹೊಂದಿದೆ ಮತ್ತು A-321 ಮಾದರಿಯ ವಿಮಾನಗಳಿಗೆ ಸೂಕ್ತವಾಗಿದೆ. ಎರಡು ಲಿಂಕ್ ಟ್ಯಾಕ್ಸಿವೇಗಳು ಮತ್ತು ಗ್ರೌಂಡ್ ಸಪೋರ್ಟ್ ಎಕ್ವಿಪ್ಮೆಂಟ್ ಏರಿಯಾ ಜೊತೆಗೆ ಎಂಟು A321 ಗಳನ್ನು ಪಾರ್ಕಿಂಗ್ ಮಾಡಲು ಸೂಕ್ತವಾದ ಏಪ್ರನ್ ಅನ್ನು ಸಹ ನಿರ್ಮಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
