ಅಯೋಧ್ಯೆ, 25 ಡಿಸೆಂಬರ್(ಹಿ.ಸ):
ಆ್ಯಂಕರ್ :
ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಗೆ ದಿನಗಣನೆ ಆರಂಭವಾಗಿದೆ. ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ) ಅವರು ಡಿ.30 ರಂದು ಅಯೋಧ್ಯೆಯಲ್ಲಿ ವಿಮಾನ ನಿಲ್ದಾಣ ಉದ್ಘಾಟಿಸಿ ರೋಡ್ ಶೋ ನಡೆಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಡಿಸೆಂಬರ್ 30 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದು, ಮರ್ಯಾದಾ ಪುರುಷೋತ್ತಮ ಶ್ರೀರಾಮ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ. ಜೊತೆಗೆ 3,284.60 ಕೋಟಿ ವೆಚ್ಚದ 29 ಅಭಿವೃದ್ಧಿ ಯೋಜನೆಗಳಿಗೆ ಮೋದಿ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ನಂತರ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲೂ ಪಾಲ್ಗೊಳ್ಳಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
