ಶ್ರೀನಗರ,8 ನವೆಂಬರ್ (ಹಿ.ಸ):
ಆ್ಯಂಕರ್ :ಮೂರು ದಿನಗಳ ಉತ್ತರಾಖಂಡ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಹಿಮಾಲಯದ ತಪ್ಪಲಿನಲ್ಲಿರುವ ಬದರಿನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ನಂತರ ಶ್ರೀನಗರದಲ್ಲಿ ಹೇಮಾವತಿ ನಂದನ್ ಬಹುಗುಣ ಗರ್ವಾಲ್ ವಿಶ್ವವಿದ್ಯಾಲಯದ ೧೧ನೇ ಘಟಿಕೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಳೆ ಡೆಹ್ರಾಡೂನ್ನಲ್ಲಿ ಉತ್ತರಾಖಂಡ ಸಂಸ್ಥಾಪನಾ ದಿನದಲ್ಲಿ ಭಾಗಿಯಾಗಲಿದ್ದಾರೆ. ಅವರು ನಿನ್ನೆ ಉತ್ತರಾಖಂಡ ರಾಜ್ಯದ ಉಧಂಸಿಂಗ್ನಗರ ಜಿಲ್ಲೆಯ ಗೋವಿಂದ ಬಲ್ಲಭ್ ಪಂತ್ ಕೃಷಿ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದ ೩೫ನೇ ಘಟಿಕೋತ್ಸವದಲ್ಲಿ ಭಾಗಿಯಾಗಿದ್ದರು. ಉತ್ತರಾಖಂಡ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ನಿವೃತ್ತ ಗುರ್ಮಿತ್ ಸಿಂಗ್, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ರಾಜ್ಯ ಸಚಿವ ಗಣೇಶ್ ಜೋಶಿ ಹಾಜರಿದ್ದರು. ೨೦೨೨-೨೩ನೇ ಸಾಲಿನ ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ಒಂದು ಸಾವಿರದ ೧೩೪ ವಿದ್ಯಾರ್ಥಿಗಳಿಗೆ ಘಟಿಕೋತ್ಸವದಲ್ಲಿ ಪದವಿ ಪ್ರದಾನ ಮಾಡಲಾಯಿತು. ಇದೇ ವೇಳೆ ತಲಾ ೧೧ ಚಿನ್ನ ಮತ್ತು ಬೆಳ್ಳಿ ಪದಕ ಹಾಗೂ ೧೦ ಕಂಚಿನ ಪದಕಗಳನ್ನು ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಯಿತು.
ಹಿಂದೂಸ್ತಾನ್ ಸಮಾಚಾರ್
