
ಗುವಾಹಟಿ, 24ಜನವರಿ(ಹಿ.ಸ):
ಆ್ಯಂಕರ್ :
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅಸ್ಸಾಂ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಪ್ರಸ್ತುತ ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯಯಾತ್ರೆ ನಡೆಸುತ್ತಿರುವ ರಾಹುಲ್ ಗಾಂಧಿಗೆ ಗುವಾಹಟಿಯ ಕೆಲ ರಸ್ತೆಗಳಲ್ಲಿ ಱಲಿಗೆ ನಿಷೇಧ ಹೇರಲಾಗಿತ್ತು.
ಇದರಿಂದ ಆಕ್ರೋಶಗೊಂಡ ರಾಹುಲ್ ಗಾಂಧಿ ಹಾಗೂ ಬೆಂಬಲಿಗರು ಬ್ಯಾರಿಕೇಡ್ಗಳನ್ನು ಹತ್ತಿ ಪೊಲೀಸರ ಜೊತೆ ಘರ್ಷಣೆ ನಡೆಸಿದ್ದರು. ತಳ್ಳಾಟ-ನೂಕಾಟದಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಹಾಗೂ ಕೆಲವು ಬೆಂಬಲಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ರಾಹುಲ್ ಗಾಂಧಿ ಅವರ ಜೊತೆ ನಾನಿದ್ದೇನೆ, ನನ್ನಂತಹ ಕೋಟ್ಯಂತರ ಭಾರತೀಯರಿದ್ದಾರೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟ್ ಮಾಡಿರೋ ಸಿಎಂ, ಸಿದ್ದರಾಮಯ್ಯ, ಸತ್ಯ, ಧರ್ಮ, ನ್ಯಾಯದ ಹಾದಿಯಲ್ಲಿ ನಡೆಯುವವರು ಯಾವತ್ತಿಗೂ ಭಯ ಪಡಲಾರರು. ನಮ್ಮ ನಾಯಕರಾದ ರಾಹುಲ್ ಗಾಂಧಿ ಅವರ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಯ ಸರ್ವಾಧಿಕಾರಿ ಸಾಮ್ರಾಜ್ಯದೊಳಗೆ ತಲ್ಲಣ ಸೃಷ್ಟಿಸಿದೆ ಎಂದು ಕಿಡಿಕಾರಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
