ನವದೆಹಲಿ, 20 ಆಗಸ್ಟ್ (ಹಿ.ಸ.) :
ಆ್ಯಂಕರ್ : ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿತರಾದ ಅಥವಾ 30 ದಿನಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿರುವ ಪ್ರಧಾನಿ, ಮುಖ್ಯಮಂತ್ರಿ ಹಾಗೂ ಸಚಿವರನ್ನು ಹುದ್ದೆಯಿಂದ ತೆಗೆದುಹಾಕುವ ವ್ಯವಸ್ಥೆ ಒಳಗೊಂಡ ಮಸೂದೆ ಸೇರಿದಂತೆ ಮೂರು ಮಸೂದೆಗಳನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಲಿದೆ.
ಮಸೂದೆಗಳು:
ಕೇಂದ್ರಾಡಳಿತ ಪ್ರದೇಶಗಳು (ತಿದ್ದುಪಡಿ) ಮಸೂದೆ, 2025, ಸಂವಿಧಾನ (130ನೇ ತಿದ್ದುಪಡಿ) ಮಸೂದೆ, 2025, ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2025
ಇವುಗಳನ್ನು ಜಂಟಿ ಸಮಿತಿಗೆ ಕಳುಹಿಸಲು ಗೃಹ ಸಚಿವ ಅಮಿತ್ ಶಾ ಪ್ರಸ್ತಾಪ ಮಂಡಿಸಲಿದ್ದಾರೆ.
ಕಾಂಗ್ರೆಸ್, ಈ ಮಸೂದೆ ಪ್ರತಿ ಪಕ್ಷಗಳನ್ನು ಅಸ್ಥಿರಗೊಳಿಸುವ ಉದ್ದೇಶ ಹೊಂದಿದೆ ಎಂದು ಆರೋಪಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa
