ನವದೆಹಲಿ, 11 ಡಿಸೆಂಬರ್(ಹಿ.ಸ):
ಆ್ಯಂಕರ್ : ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು : ಗೆಹ್ಲೋಟ್, ಬಘೇಲ್, ಕಮಲ್ನಾಥ್ ರಾಜಕೀಯ ಭವಿಷ್ಯ ನಿರ್ಧರಿಸಲಿರುವ ಖರ್ಗೆ. ಲೋಕಸಭೆ ಚುನಾವಣೆ ಹಿನ್ನೆಲೆ ನಾನಾ ಲೆಕ್ಕಾಚಾರಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹೈಕಮಾಂಡ್ ಹಿರಿಯ ನಾಯಕರಿಗೆ ಮತ್ತೆ ಮಣೆ ಹಾಕುವ ಸಾಧ್ಯತೆ ಇದೆ. ಇದರ ಜೊತೆಗೆ ಯುವ ನಾಯಕರನ್ನು ಚುನಾವಣೆಯಲ್ಲಿ ಸಕ್ರಿಯವಾಗಿ ಬಳಸಿಕೊಳ್ಳುವ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ ಎಂದು ತಿಳಿದು ಬಂದಿದೆ.
ಹಿಂದೂಸ್ತಾನ್ ಸಮಾಚಾರ್
