ನವದೆಹಲಿ, 28ಅಕ್ಟೋಬರ್ (ಹಿ.ಸ):
ಆ್ಯಂಕರ್ :
ದಿನಗಳ ಹಿಂದಷ್ಟೇ ಸೂರ್ಯಗ್ರಹಣ ಸಂಭವಿಸಿತ್ತು . ಆದ್ರೆ ಸೂರ್ಯಗ್ರಹಣ ಭಾರತದಲ್ಲಿ ಗೋಚರವಾಗಿರಲಿಲ್ಲ. ಇದೀಗ ಸೂರ್ಯಗ್ರಹಣ ಸಂಭವಿಸಿದ ಎರಡು ವಾರಗಳ ಬೆನ್ನಲ್ಲೇ ಚಂದ್ರಗ್ರಹಣ ಸಂಭವಿಸುತ್ತಿದೆ . ಈ ವರ್ಷದ ಎರಡನೇ ಮತ್ತು ಕೊನೆಯ ಚಂಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿದೆ. 30 ವರ್ಷದ ಬಳಿಕ ಶರದ್ ಹುಣ್ಣಿಮೆಯಂದೇ ಚಂದ್ರಗ್ರಹಣಕ್ಕೆ ಬಾನು ಸಾಕ್ಷಿಯಾಗಲಿದೆ. ಇಂದು ಅಂದ್ರೆ ಅ.28 ಮತ್ತು 29 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ.
ಚಂದ್ರ ಗ್ರಹಣ ಸಮಯ
ಅಕ್ಟೋಬರ್ 28ರ ರಾತ್ರಿ 11.31ಕ್ಕೆ ಚಂದ್ರಗ್ರಹಣ ಆರಂಭ ಅಕ್ಟೋಬರ್ 29ರ ಮಧ್ಯರಾತ್ರಿ 3.36ಕ್ಕೆ ಚಂದ್ರಗ್ರಹಣ ಅಂತ್ಯ
ಈ ಭಾರಿ ಭಾರತದಲ್ಲಿ ಭಾಗಶಃ ಚಂದ್ರಗ್ರಹಣ ಸಂಭವಿಸಲಿದೆ
ಇಂದು ರಾತ್ರಿ 11.30ರಿಂದ ಚಂದ್ರಗ್ರಹಣ ಆರಂಭವಾಗಲಿದೆ. ಇಂದು ಮಧ್ಯರಾತ್ರಿ ವೇಳೆಗೆ ಭಾರತದ ಎಲ್ಲಾ ಸ್ಥಳಗಳಲ್ಲಿ ಭಾಗಶಃ ಚಂದ್ರಗ್ರಹಣ ಗೋಚರಿಸಲಿದೆ. ರಾತ್ರಿ 11.30ಕ್ಕೆ ಆರಂಭವಾಗುವ ಚಂದ್ರಗ್ರಹಣ ನಾಳೆ ಬೆಳಗಿನ ಜಾವ 3.36 ನಿಮಿಷಕ್ಕೆ ಕೊನೆಗೊಳ್ಳುತ್ತದೆ. ಈ ಸಮಯದಲ್ಲಿ ಭಾರತದಲ್ಲಿ ಚಂದ್ರಗ್ರಹಣವನ್ನು ಸ್ಪಷ್ಟವಾಗಿ ವೀಕ್ಷಿಸಿಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್
