ಸೂರತ್, 17 ಡಿಸೆಂಬರ್(ಹಿ.ಸ):
ಆ್ಯಂಕರ್ :ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದಿನಿಂದ ಎರಡು ದಿನ ಗುಜರಾತ್ನ ಸೂರತ್ ಮತ್ತು ಉತ್ತರಪ್ರದೇಶದ ವಾರಾಣಸಿಗೆ ಭೇಟಿ ನೀಡಲಿದ್ದಾರೆ. ಇಂದು ಅವರು, ಸೂರತ್ ವಿಮಾನ ನಿಲ್ದಾಣದ ಹೊಸ ಸಮಗ್ರ ಟರ್ಮಿನಲ್ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ. ಅವರು, ಸೂರತ್ ವಜ್ರ ಮಳಿಗೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಅವರು, ಮಧ್ಯಾಹ್ನ ವಾರಾಣಸಿಗೆ ಭೇಟಿ ನೀಡಿ ’ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ ನಮೋ ಘಾಟ್ನಲ್ಲಿ ಕಾಶಿ ತಮಿಳ್ ಸಂಗಮಂ-೨೦೨೩ ಕ್ಕೆ ಚಾಲನೆ ನೀಡಲಿದ್ದಾರೆ. ಸೋಮವಾರ ಅವರು, ಸ್ವರವೇದ ಮಹಾಮಂದಿರಕ್ಕೆ ಭೇಟಿ ನೀಡಿ ಬಳಿಕ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ೧೯ ಸಾವಿರದ ೧೫೦ ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕಸ್ಥಾಪನೆ ನೆರವೇರಿಸಿ, ’ವಿಕಸಿತ ಭಾರತ ಸಂಕಲ್ಪ ಯಾತ್ರೆ’ಯಲ್ಲಿ ಭಾಗಿಯಾಗುವ ಕಾರ್ಯಕ್ರಮ ನಿಗದಿಯಾಗಿದೆ.
ಹಿಂದೂಸ್ತಾನ್ ಸಮಾಚಾರ್
