ದೆಹಲಿ, 26 ಡಿಸೆಂಬರ್(ಹಿ.ಸ):
ಆ್ಯಂಕರ್ :
ನವದೆಹಲಿಯ ಭಾರತ್ ಮಂಟಪದಲ್ಲಿ ವೀರ್ ಬಾಲ್ ದಿವಸ್ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಭಾಗವಹಿಸಲಿದ್ದಾರೆ.
ಯುವಕರಿಂದ ನಡೆಯಲಿರುವ ಪಥ ಸಂಚಲನಕ್ಕೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಲಿದ್ದಾರೆ. ಶ್ರೀ ಗುರು ಗೋಬಿಂದ್ ಸಿಂಗ್ ಅವರ ಮಕ್ಕಳಾದ ಸಾಹಿಬ್ಜಾದಾಸ್ ಬಾಬಾ ಜೋರಾವರ್ ಸಿಂಗ್ ಮತ್ತು ಬಾಬಾ ಫತೇ ಸಿಂಗ್ ಅವರು ಹುತಾತ್ಮರಾದ ಹಿನ್ನೆಲೆಯಲ್ಲಿ ಈ ದಿನದಂದು ಅವರನ್ನು ಸ್ಮರಿಸಲಾಗುತ್ತಿದೆ.
ಕಳೆದ ವರ್ಷ ಜನವರಿಯಲ್ಲಿ ಶ್ರೀ ಗುರು ಗೋವಿಂದ್ ಸಿಂಗ್ ಅವರ ಪ್ರಕಾಶ್ ಪುರಬ್ ದಿನದಂದು, ಡಿಸೆಂಬರ್ ೨೬ ಅನ್ನು ವೀರ್ ಬಾಲ್ ದಿವಸ್ ಎಂದು ಆಚರಿಸಲಾಗುವುದು ಎಂದು ಪ್ರಧಾನಿ ಘೋಷಿಸಿದ್ದರು ಎಂದು ನಮ್ಮ ಬಾತ್ಮೀದಾರರು ವರದಿ ಮಾಡಿದ್ದಾರೆ.
ಈ ಮಕ್ಕಳ ಧೈರ್ಯದ ಕಥೆಯನ್ನು ನಾಗರಿಕರಿಗೆ, ವಿಶೇಷವಾಗಿ ಚಿಕ್ಕ ಮಕ್ಕಳಿಗೆ ತಿಳಿಸಲು ಮತ್ತು ಶಿಕ್ಷಣ ನೀಡಲು ಸರ್ಕಾರ ವಿಶೇಷ ಕಾರ್ಯಕ್ರಮ ಆಯೋಜಿಸುತ್ತಿದೆ. ದೇಶಾದ್ಯಂತ ಶಾಲೆಗಳು, ಶಿಶುಪಾಲನಾ ಸಂಸ್ಥೆಗಳಲ್ಲಿ ಈ ಚಿಣ್ಣರ ಜೀವನ ಕಥೆ, ತ್ಯಾಗದ ಕುರಿತು ಡಿಜಿಟಲ್ ಪ್ರದರ್ಶನವನ್ನು ಪ್ರದರ್ಶಿಸಲಾಗುತ್ತದೆ. ವೀರ್ ಬಾಲ್ ದಿವಸ್ ಕುರಿತಾದ ಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ. ಒಙಃhಚಿಡಿಚಿಣ ಮತ್ತು ಒಥಿಉov ಪೋರ್ಟಲ್ಗಳ ಮೂಲಕ ರಸಪ್ರಶ್ನೆಯಂತಹ ವಿವಿಧ ಆನ್ಲೈನ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್
