ಮುಂಬೈ,26ಅಕ್ಟೋಬರ್ (ಹಿ.ಸ):
ಆ್ಯಂಕರ್ :ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದು, ಶಿರಡಿಯ ಸಾಯಿಬಾಬ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ದೇವಸ್ಥಾನದ ಆವರಣದಲ್ಲಿ ದರ್ಶನ ಪಡೆಯಲು ಭಕ್ತಾದಿಗಳಿಗಾಗಿ ನಿರ್ಮಿಸಿರುವ ಕಟ್ಟಡವನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಧ್ಯಾಹ್ನ ೨ ಗಂಟೆಗೆ ನಿಲ್ವಾಂಡೆ ಅಣೆಕಟ್ಟೆಯಲ್ಲಿ ಗಂಗಾ ಪೂಜೆ ನೆರವೇರಿಸಲಿದ್ದಾರೆ. ನಂತರ ಅಣೆಕಟ್ಟೆಯ ನಾಲಾ ಸಂಪರ್ಕ ಜಾಲವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಮಧ್ಯಾಹ್ನ ೩.೧೫ಕ್ಕೆ ಶಿರಡಿಯಲ್ಲಿ ಸಾರ್ವಜನಿಕ ಸಮಾರಂಭ ಉದ್ದೇಶಿಸಿ ಮಾತನಾಡಲಿದ್ದಾರೆ. ಇದೇ ಸಂದರ್ಭದಲ್ಲಿ ಆರೋಗ್ಯ, ರಸ್ತೆ, ರೈಲು, ತೈಲ ಮತ್ತು ಅನಿಲ ವಲಯದಲ್ಲಿ ೭ ಸಾವಿರದ ೫೦೦ ಕೋಟಿ ರೂಪಾಯಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
