
ದೆಹಲಿ, 27 ಡಿಸೆಂಬರ್(ಹಿ.ಸ):
ಆ್ಯಂಕರ್ :
ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ದೇಶಾದ್ಯಂತ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಸಾವಿರಾರು ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಅರ್ಹ ಫಲಾನುಭವಿಗಳಿಗೆ ಈ ಯೋಜನೆಗಳ ಲಾಭ ತಲುಪಿಸುವ ಉದ್ದೇಶದೊಂದಿಗೆ ಯಾತ್ರೆ ಕೈಗೊಳ್ಳಲಾಗಿದೆ. ಈ ವರ್ಷದ ನವೆಂಬರ್ ೧೫ ರಂದು ವಿಕಸಿತ ಭಾರತ ಸಂಕಲ್ಪ ಯಾತ್ರೆ ದೇಶಾದ್ಯಂತ ಆರಂಭವಾಗಿದ್ದು, ಅಂದಿನಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಫಲಾನುಭವಿಗಳೊಂದಿಗೆ ಸಂವಾದ ನಡೆಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
