ದೆಹಲಿ, 14 ಡಿಸೆಂಬರ್(ಹಿ.ಸ):
ಆ್ಯಂಕರ್ :
ಸಂಸತ್ನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಗೆ ಸಂಬಂಧಿಸಿಂತೆ ಒಟ್ಟು 5 ಜನರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಆರೋಪಿಗಳ ವಿರುದ್ಧ ಭಯೋತ್ಪಾದನಾ ವಿರೋಧಿ ಕಾನೂನು, ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಲ್ಲದೇ ಆರೋಪಿಗಳನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ನಡೆದ ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಒಟ್ಟು 6 ಮಂದಿ ಭಾಗಿಯಾಗಿದ್ದು, ಮೈಸೂರಿನ ನಿವಾಸಿ ಮನೋರಂಜನ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಸಂಪರ್ಕ ಹೊಂದಿದ್ದರು ಎಂದು ತಿಳಿದುಬಂದಿದೆ. ಮೈಸೂರಿನ ವಿಜಯನಗರ ನಿವಾಸಿ ಎಂಜಿನಿಯರಿಂಗ್ ಪದವೀಧರ ಮನೋರಂಜನ್, ಲಕ್ನೋದ ಸಾಗರ್ ಶರ್ಮಾ, ಹರಿಯಾಣದ ಹಿಸಾರ್ನ ನೀಲಂ, ಮಹಾರಾಷ್ಟ್ರದ ಲಾತೂರ್ನ ಅಮೋಲ್ ಶಿಂಧೆ ಹಾಗೂ ವಿಶಾಲ್ ಎಂಬವರನ್ನು ಪೊಲೀಸರು ಬಂಧಿಸಿದ್ದು, ಇನ್ನೋರ್ವ ಆರೋಪಿಗಾಗಿ ಶೋಧ ಮುಂದುವರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಗೆ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆದೇಶಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್
